ಯೋಗಿಗೆ 3 ದಿನ, ಮಾಯಾವತಿಗೆ 2 ದಿನ ಚುನಾವಣಾ ಆಯೋಗ ಬ್ರೇಕ್ !

ಪ್ರಚೋದನಾಕಾರಿ ಹೇಳಿಕೆ ನೀಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಗೆ ಮೂರು ದಿನ ಹಾಗೂ ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿಗೆ ಎರಡು ದಿನ ಚುನಾವಣಾ ಪ್ರಚಾರ ಮಾಡದಂತೆ ಆಯೋಗ ಆದೇಶಿಸಿದೆ. ಈ ಇಬ್ಬರು ನಾಯಕರ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸಲಾಗಿದೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದ ರಾಜಕೀಯ ನಾಯಕರ ವಿರುದ್ಧ ಕ್ರಮಕೈಗೊಳ್ಳುವಂತೆ ಸುಪ್ರೀಂಕೋರ್ಟ್ ಸೋಮವಾರ ಕೇಂದ್ರ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಆಯೋಗ ಕ್ರಮ ಕೈಗೊಂಡಿದೆ.

Share Post

Leave a Reply

Your email address will not be published. Required fields are marked *

error: Content is protected !!