ಲೋಕಸಭಾ ಸಮರ : ರಾಜ್ಯದ 14 ಲೋಕಸಭಾ ಕ್ಷೇತ್ರದಲ್ಲಿ ಮತದಾನ ಆರಂಭ

ರಾಜ್ಯದಲ್ಲಿ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಒಟ್ಟು 14 ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ.ಬೆಳಗ್ಗೆ 7 ರಿಂದ ಸಂಜೆ 6 ಗಂಟೆಯವರೆಗೂ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಮತದಾರರು ಸರತಿ ಸಾಲಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.ದಕ್ಷಿಣ ಕನ್ನಡ, ಉಡುಪಿ- ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಮತದಾನ ನಡೆಯುತ್ತಿದೆ.  14 ಕ್ಷೇತ್ರಗಳ ಪೈಕಿ ಮಂಡ್ಯ ಕಣ ಅತ್ಯಂತ ಹೈವೋಲ್ಟೇಜ್, ಹಾಟ್‍ಸೀಟ್ ಎನಿಸಿಕೊಂಡಿದೆ.

Share Post

Leave a Reply

Your email address will not be published. Required fields are marked *

error: Content is protected !!