ಲಿಬಿಯಾ ತೊರೆದು ತಕ್ಷಣವೇ ತವರಿಗೆ ಬನ್ನಿ – ಭಾರತೀಯರಿಗೆ ಸುಷ್ಮಾ ಸ್ವರಾಜ್ ಮನವಿ

ಲಿಬಿಯಾ ರಾಜಧಾನಿ ಟ್ರಿಪೊಲಿಯಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಅಲ್ಲಿ ಸಿಲುಕಿ ಹಾಕಿಕೊಂಡಿರುವ 500ಕ್ಕೂ ಹೆಚ್ಚು ಭಾರತೀಯರು ಸುರಕ್ಷತೆ ದೃಷ್ಟಿಯಿಂದ ನಗರವನ್ನು ತಕ್ಷಣವೇ ತೊರೆಯುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಕರೆ ನೀಡಿದ್ದಾರೆ. ವಿಶ್ವಸಂಸ್ಥೆ ಬೆಂಬಲಿತ ಪ್ರಧಾನಿ ಫಯೇಝ್ ಅಲ್ ಸರ್ರಜ್ ಅವರನ್ನು ಅಧಿಕಾರದಿಂದ ಕೆಳಗಿಳಿಸುವಂತೆ ಲಿಬಿಯಾದ ಮಿಲಿಟರಿ ಕಮಾಂಡರ್ ಖಲಿಫಾ ಹಫ್ತರ್ ಅವರ ಪಡೆ ದಾಳಿ ನಡೆಸಲು ಆರಂಭಿಸಿದೆ. ಕಳೆದ ಎರಡು ವಾರಗಳಲ್ಲಿ ಟ್ರಿಪೊಲಿಯಲ್ಲಿ ನಡೆದ ದಾಳಿಯಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಅಲ್ಲಿನ ಪರಿಸ್ಥಿತಿ ಸದ್ಯ ಬಿಗುವಿನಿಂದ ಕೂಡಿದೆ.

Share Post

Leave a Reply

Your email address will not be published. Required fields are marked *

error: Content is protected !!