ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರಕ್ಕೆ ಕೆ. ರತ್ನಪ್ರಭ ಬಿಜೆಪಿ ಅಭ್ಯರ್ಥಿ?

ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ರತ್ನಪ್ರಭ ಅವರನ್ನು ಚಿಂಚೋಳಿ ಮೀಸಲು ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ನಿರ್ಧರಿಸಿದೆ ಅಂತ ಮೂಲಗಳು ತಿಳಿಸಿವೆ. ಉಮೇಶ್ ಜಾಧವ್ ಅವರಿಂದ ತೆರವಾಗಿರುವ ಚಿಂಚೋಳಿ ಕ್ಷೇತ್ರದ ಚುನಾವಣೆ ಮೇ 19 ರಂದು ನಡೆಯಲಿದ್ದು ರತ್ನಪ್ರಭಾ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ.  ಸಚಿವ ಸಂಪುಟದಲ್ಲಿ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ನಾಯಕರ ವಿರುದ್ಧ ಸಿಡಿದಿದ್ದ ಉಮೇಶ್ ಜಾಧವ್ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈಗ ಜಾಧವ್ ಕಲಬುರಗಿ ಕ್ಷೇತ್ರದಲ್ಲಿ ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

 

Share Post

Leave a Reply

Your email address will not be published. Required fields are marked *

error: Content is protected !!