“ಸುಪ್ರೀಂ ಮುಂದೆ ರಾಹುಲ್ ವಿಷಾದ”

ರಫೇಲ್​​ಗೆ ಸಂಬಂಧಿಸಿದ ಸುಪ್ರೀಂ  ಆದೇಶವನ್ನು ಸಾರ್ವಜನಿಕರ ಮುಂದೆ ತಪ್ಪಾಗಿ ಅರ್ಥೈಸಿದ ಆರೋಪಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್​​ಗೆ ಸ್ಪಷ್ಟನೆ ನೀಡಿದ್ದಾರೆ. ರಾಜಕೀಯ ಪ್ರಚಾರದ ಭರದಲ್ಲಿ ನಾನು ಆ ರೀತಿ ಹೇಳಿಕೆ ನೀಡಿದೆ ಎಂದು ರಾಹುಲ್ ಗಾಂಧಿ ಒಪ್ಪಿಕೊಂಡಿದ್ದಾರೆ. ಈ ಬಗ್ಗೆ ವಿಷಾದಿಸುತ್ತೇನೆ ಎಂದು ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್​ಗೆ ತಿಳಿಸಿದ್ದಾರೆ.

ಕಳ್ಳತನವಾದ ರಫೇಲ್ ದಾಖಲೆಗಳನ್ನು ಅರ್ಜಿದಾರರು ಬಳಸಿಕೊಂಡಿದ್ದಾರೆ ಎಂದು ಈ ಹಿಂದೆ ಕೇಂದ್ರ ಸರ್ಕಾರ ಕೋರ್ಟ್​ಗೆ ಹೇಳಿತ್ತು. ಈ ದಾಖಲೆಗಳನ್ನ ಕೋರ್ಟ್​ನಲ್ಲಿ ಸಾಕ್ಷಿಯಾಗಿ ಬಳಸಲು ಸುಪ್ರೀಂ ಕೋರ್ಟ್​ ಇತ್ತೀಚೆಗೆ ಸಮ್ಮತಿ ನೀಡಿ ಆದೇಶ ಹೊರಡಿಸಿತ್ತು. ಸುಪ್ರೀಂ ಕೋರ್ಟ್​​ನ ಈ ಆದೇಶವನ್ನು ರಾಹುಲ್ ಗಾಂಧಿ ಸಾರ್ವಜನಿಕರ ಮುಂದೆ ಹಾಗೂ ಮಾಧ್ಯಮಗಳ ಮುಂದೆ ತಪ್ಪಾಗಿ ವಿವರಿಸಿದ್ದಾರೆ ಎಂದು ಬಿಜೆಪಿ ಆರೋಪಿಸಿ ಕೋರ್ಟ್​ ಮೆಟ್ಟಿಲೇರಿತ್ತು.

Share Post

Leave a Reply

Your email address will not be published. Required fields are marked *

error: Content is protected !!