ನನಗೆ ಆರ್ಥಿಕ ಮರಣದಂಡನೆ ನೀಡಲಾಗಿದೆ ಅಂತ ಮಲ್ಯ ಹೇಳಿದ್ದೇಕೆ…?

ನನ್ನನ್ನು ತಲೆಮರೆಸಿಕೊಂಡ ಆರ್ಥಿಕ ಅಪರಾಧಿ ಎಂದು ವಿಶೇಷ ನ್ಯಾಯಾಲಯ ಘೋಷಿಸಿರುವುದು ಆರ್ಥಿಕ ಮರಣದಂಡನೆ ಎಂದು ಉದ್ಯಮಿ ವಿಜಯ್ ಮಲ್ಯ ಹೇಳಿದ್ದಾರೆ. ತಲೆಮರೆಸಿಕೊಂಡ ಆರ್ಥಿಕ ಅಪರಾಧಿಗಳ ಕಾಯ್ದೆಯ ಕೆಲ ಕಾನೂನುಗಳನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಮಲ್ಯ ಪರ ವಕೀಲರು ಈ ಹೇಳಿಕೆ ನೀಡಿದ್ದಾರೆ. ‘ನನ್ನನ್ನು ಆರ್ಥಿಕ ಅಪರಾಧಿ ಎಂದು ಘೋಷಣೆ ಮಾಡಿರುವುದು ಮತ್ತು ತನ್ನ ಆಸ್ತಿಗಳನ್ನ ಮುಟ್ಟುಗೋಲು ಹಾಕಿಕೊಂಡಿರುವುದು ತನ್ನ ಪಾಲಿಗೆ ಆರ್ಥಿಕ ಮರಣದಂಡನೆಯಾದಂತಾಗಿದೆ ಎಂದು ಮಲ್ಯ ಹೇಳಿಕೆಯನ್ನು ದಾಖಲಿಸಿದ್ದಾರೆ. ‘ನನ್ನ ಸಾಲಗಳು ಹಾಗೂ ಅದರ ಮೇಲಿನ ಬಡ್ಡಿ ಮೊತ್ತವು ಹೆಚ್ಚಾಗುತ್ತಿವೆ. ಈ ಸಾಲಗಳನ್ನ ತೀರಿಸುವಷ್ಟು ಆಸ್ತಿಗಳು ನನ್ನಲ್ಲಿವೆ. ಆದರೆ, ಈ ಆಸ್ತಿ ಬಳಸಿ ಸಾಲ ತೀರಿಸಲು ಸರ್ಕಾರ ಅವಕಾಶ ನೀಡುತ್ತಿಲ್ಲ. ನನ್ನ ಆಸ್ತಿಗಳ ಮೇಲೆ ನನಗೇ ಅಧಿಕಾರ ಇಲ್ಲದಂತಾಗಿದೆ. ಇದು ನನಗೆ ಆರ್ಥಿಕ ಮರಣ ದಂಡನೆ ನೀಡಿದಂತಾಗಿದೆ’ ಎಂದು ಮಲ್ಯ ಪರ ವಕೀಲ ಅಮಿತ್ ದೇಸಾಯಿ ಬಾಂಬೆ ಹೈಕೋರ್ಟ್ ಪೀಠಕ್ಕೆ ತಿಳಿಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!