ವಾರಾಣಾಸಿಯಿಂದ ಪ್ರಧಾನಿ ಮೋದಿ ಉಮೇದುವಾರಿಕೆ

ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಎರಡನೇ ಬಾರಿಗೆ ಸಂಸತ್ತಿಗೆ ಆಯ್ಕೆ ಬಯಸಿ ಪ್ರಧಾನಿ ನರೇಂದ್ರ ಮೋದಿ ತಮ್ಮ ನಾಮಪತ್ರ ಸಲ್ಲಿಸಿದ್ರು. ವಾರಣಾಸಿ ಜಿಲ್ಲಾಧಿಕಾರಿ ಕಛೇರಿಯಲ್ಲಿ ಮೋದಿ ತಮ್ಮ ಉಮೇದುವಾರಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಸಲ್ಲಿಸಿದರು.

ಮೋದಿ ನಾಮಪತ್ರ ಸಲ್ಲಿಕೆ ಕಾರ್ಯಕ್ರಮ ಬಿಜೆಪಿ ನೇತೃತ್ವದ ಎನ್‌.ಡಿ.ಎ. ಮೈತ್ರಿಕೂಟದ ಬಲಪ್ರದರ್ಶನಕ್ಕೂ ಸಾಕ್ಷಿಯಾಯಿತು. ಮೋದಿ ನಾಮಪತ್ರ ಸಲ್ಲಿಕೆಗೆ ಪಕ್ಷದ ಹಿರಿಯ ನಾಯಕರು ಮಾತ್ರವಲ್ಲದೇ ಮೈತ್ರಿಕೂಟದ ಪ್ರಮುಖ ನಾಯಕರೂ ಉಪಸ್ಥಿತರಿದ್ದುದು ಎದ್ದು ಕಾಣುತ್ತಿತ್ತು.

Share Post

Leave a Reply

Your email address will not be published. Required fields are marked *

error: Content is protected !!