INS ವಿಕ್ರಮಾದಿತ್ಯದಲ್ಲಿ ಬೆಂಕಿ – ಓರ್ವ ಅಧಿಕಾರಿ ದುರ್ಮರಣ

ಕಾರಾವಾರದಲ್ಲಿರೋ ದೇಶದ ಅತಿ ದೊಡ್ಡ ಯುದ್ಧ ನೌಕೆ ಐಎನ್‍ಎಸ್ ವಿಕ್ರಮಾದಿತ್ಯದ ಬಾಯ್ಲರ್ ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಲೆಫ್ಟಿನೆಂಟ್ ಕಮಾಂಡರ್ ಒಬ್ಬರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಅರಗಾ ಗ್ರಾಮದ ಕದಂಬ ನೌಕಾನೆಲೆಯಲ್ಲಿ ನಡೆದಿದೆ.

ಇಂದು ಬೆಳಗ್ಗೆ ವಿಕ್ರಮಾದಿತ್ಯದ ನೌಕಾ ಸಿಬ್ಬಂದಿ ಕಾರ್ಯ ನಿರ್ವಹಿಸುತ್ತಿರುವ ವೇಳೆ ನೌಕೆಯ ಒಳಭಾಗದ ಬಾಯ್ಲರ್ ಕಂಪಾರ್ಟ್‌ಮೆಂಟ್‌ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯನ್ನು ನಂದಿಸುವ ಸಮಯದಲ್ಲಿ ಲೆಫ್ಟಿನೆಂಟ್ ಕಮಾಂಡರ್ ಡಿಎಸ್ ಚೌವ್ಹಾಣ್ ಮೃತಪಟ್ಟು 7 ಮಂದಿ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದಾರೆ.

ಐಎನ್‍ಎಸ್ ವಿಕ್ರಮಾದಿತ್ಯ ಹಡಗು ದೇಶದ ಅತಿದೊಡ್ಡ ಯುದ್ಧನೌಕೆಯಾಗಿದೆ. ಭಾರತ ಪಾಕ್ ಮಧ್ಯೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದರಿಂದ ಗುಜರಾತಿಗೆ ತೆರಳಿದ್ದ ಐಎನ್‍ಎಸ್ ವಿಕ್ರಮಾದಿತ್ಯ ಇಂದು ಮುಂಜಾನೆ ಕಾರವಾರದ ಸೀಬರ್ಡ್ ನೌಕಾನೆಲೆಗೆ ವಾಪಸ್ಸಾಗಿತ್ತು.   

Share Post

Leave a Reply

Your email address will not be published. Required fields are marked *

error: Content is protected !!