ಕುಂದಗೋಳ ಉಪಸಮರ – ಕಾಂಗ್ರೆಸ್ ಅಭ್ಯರ್ಥಿಯಾಗಿ ಕುಸುಮಾ ಶಿವಳ್ಳಿ ಉಮೇದುವಾರಿಕೆ

ಪೌರಾಡಳಿತ ಸಚಿವರಾಗಿದ್ದ ಕಾಂಗ್ರೆಸ್‌ನ ಸಿ.ಎಸ್‌. ಶಿವಳ್ಳಿ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಕುಂದಗೋಳ ವಿಧಾನ ಸಭಾ ಕ್ಷೇತ್ರದಲ್ಲಿ ರಾಜಕೀಯ ರಂಗೇರಿದೆ. ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಿ ಶಿವಳ್ಳಿ ಅವರ ಪತ್ನಿ ಕುಸುಮಾ ಶಿವಳ್ಳಿ ತಮ್ಮ ನಾಮಪತ್ರ ಸಲ್ಲಿಸಿದ್ರು. ಇದಕ್ಕೂ ಮೊದಲು ಕುಸುಮಾ ಶಿವಳ್ಳಿ  ಸಿದ್ಧಾರೂಢ ಮಠಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ರಾಜ್ಯದ ಪ್ರಮುಖ ಕಾಂಗ್ರೆಸ್‌ ನಾಯಕರ ಉಪಸ್ಥಿತಿಯಲ್ಲಿ ಭರ್ಜರಿ ರೋಡ್‌ ಶೋ ನಡೆಯಲಿದೆ. ಇದಕ್ಕಾಗಿ ಮಾಜೀ ಮುಖ್ಯಮಂತ್ರಿ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌, ಶಾಸಕ ಭೈರತಿ ಸುರೇಶ್‌ ಸೇರಿದಂತೆ ಘಟಾನುಘಟಿ ‘ಕೈ’ ನಾಯಕರು ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!