SSLCಯಲ್ಲೂ ಗ್ರಾಮೀಣ ವಿದ್ಯಾರ್ಥಿಗಳೇ ಮೇಲುಗೈ

ಎಸ್ಎಸ್​ಎಲ್​​​ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಗ್ರಾಮೀಣ ವಿದ್ಯಾರ್ಥಿಗಳು ಮೇಲುಗೈ ಸಾಧಿಸಿದ್ದಾರೆ. ಈ ಬಾರಿ 8,41,666 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 73.7 ರಷ್ಟು ಫಲಿತಾಂಶ ಬಂದಿದೆ. 

ಸರ್ಕಾರಿ ಶಾಲೆಗಳ ಫಲಿತಾಂಶ ಶೇ.77.8ರಷ್ಟಿದ್ದರೆ, ಅನುದಾನಿತ ಶಾಲೆಗಳ ಫಲಿತಾಂಶ ಶೇ.77.12 ರಷ್ಟಿದ. ಅನುದಾನರಹಿತ ಶಾಲೆಗಳ ಫಲಿತಾಂಶ ಶೇ. 82.72ರಷ್ಟು ಬಂದಿದೆ. ಈ ಬಾರಿಯೂ ಹೆಣ್ಣು ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ.  ಶೇ 79.59 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ. ಹಾಗೇ ಶೇ 68.46 ರಷ್ಟು ಗಂಡು ಮಕ್ಕಳು ಉತ್ತೀರ್ಣರಾಗಿದ್ದಾರೆ.

ನಗರ ಪ್ರದೇಶದ ಶೇಕಡಾವಾರು ಫಲಿತಾಂಶ ಶೇ.70.05 ರಷ್ಟಿದೆ, ಗ್ರಾಮೀಣ ಪ್ರದೇಶದ ಫಲಿತಾಂಶ ಶೇ. 76.67ರಷ್ಟಿದೆ. ಇಬ್ಬರು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನ ಪಡೆದಿದ್ದಾರೆ. 11 ವಿದ್ಯಾರ್ಥಿಗಳು 624 ಅಂಕ ಪಡೆದುಕೊಂಡಿದ್ದಾರೆ.

ಜಿಲ್ಲಾವಾರು ಫಲಿತಾಂಶದಲ್ಲಿ ಹಾಸನಕ್ಕೆ ಮೊದಲ ಸ್ಥಾನ, ರಾಮನಗರಕ್ಕೆ ಎರಡನೇ ಸ್ಥಾನ, ಬೆಂಗಳೂರು ಗ್ರಾಮೀಣಕ್ಕೆ ಮೂರನೇ ಸ್ಥಾನ ಸಿಕ್ಕಿದೆ. ಯಾದಗರಿ ಜಿಲ್ಲೆ ಕೊನೆಯ ಸ್ಥಾನದಲ್ಲಿ ಇದೆ.

Share Post

Leave a Reply

Your email address will not be published. Required fields are marked *

error: Content is protected !!