ಕುಂದಗೋಳ ಉಪಸಮರ : ಇಂದು ಬಹಿರಂಗ ಪ್ರಚಾರ ಅಂತ್ಯ

ಹುಬ್ಬಳ್ಳಿ : ಕುಂದಗೋಳ ವಿಧಾನಸಭೆ ಉಪಚುನಾವಣೆಗೆ ಇಂದು ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಕೊನೆಗಳಿಗೆಯಲ್ಲಿ ಕಸರತ್ತು ನಡೆಸಲು ಸಜ್ಜಾಗಿವೆ.

ಮೈತ್ರಿ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಡಿ.ಕೆ.ಶಿವಕುಮಾರ್ ಮತಯಾಚನೆ ಮಾಡಲಿದ್ದಾರೆ. ಈ ವೇಳೆ ಡಿ.ಕೆ.ಸುರೇಶ್ ಸೇರಿದಂತೆ ಹಲವು ಮೈತ್ರಿ ನಾಯಕರು ಸಾಥ್ ನೀಡಲಿದ್ದಾರೆ.

ಇನ್ನು ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡ್ರು ಪರ ಬಿಜೆಪಿ ನಾಯಕರು ಮತಯಾಚನೆ ಮಾಡಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಜಗದೀಶ್ ಶೇಟ್ಟರ್ ಸೇರಿದಂತೆ ಹಲವು ಕಮಲ ನಾಯಕರು ಇಂದು ಭರ್ಜರಿ ಪ್ರಚಾರ ನಡೆಸಲಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!