ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ: ಎಫ್ಡಿಎ ಮತ್ತು ಎಸ್ಡಿಎ ಹುದ್ದೆಗಳ ಪರೀಕ್ಷಾ ದಿನಾಂಕ ಪ್ರಕಟ

ಪ್ರಥಮ ದರ್ಜೆ ಸಹಾಯಕರು /ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಜೂನ್ 8 ಶನಿವಾರದಂದು ನಡೆಯಲಿದ್ದು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಜೂನ್ 9 ಭಾನುವಾರದಂದು ನಡೆಯಲಿದೆ

ಕರ್ನಾಟಕ ಲೋಕಸೇವಾ ಆಯೋಗ ಪ್ರಥಮ ದರ್ಜೆ ಸಹಾಯಕರು (FDA) ಹಾಗೂ ದ್ವಿತೀಯ ದರ್ಜೆ ಸಹಾಯಕರು (SDA) ಹುದ್ದೆಗಳ ನೇಮಕಾತಿಯ ಸ್ಪರ್ಧಾತ್ಮಕ ಪರೀಕ್ಷಾ ದಿನಾಂಕವನ್ನು ಪ್ರಕಟಿಸಿದೆ. ಈ ಹಿಂದೆ ಕೆಪಿಎಸ್ಸಿಯಲ್ಲಿ ಖಾಲಿ ಇರುವ 844 ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿತ್ತು. ಆನ್ಲೈನ್ ಮುಖಾಂತರ ನಡೆದಿದ್ದ ಅರ್ಜಿ ಪ್ರಕ್ರಿಯೆಯು ಮಾರ್ಚ್ 20, 2019 ರಂದು ಕೊನೆಗೊಂಡಿತು. ಈ ವೇಳೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಜೂನ್ 8, 9 ಹಾಗೂ 16 ರಂದು ಪರೀಕ್ಷೆ ಇರಲಿದೆ ಎಂದು ತಿಳಿಸಿದೆ.
ಪ್ರಥಮ ದರ್ಜೆ ಸಹಾಯಕರು /ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಜೂನ್ 8 ಶನಿವಾರದಂದು ನಡೆಯಲಿದ್ದು, ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ ಜೂನ್ 9 ಭಾನುವಾರದಂದು ನಡೆಯಲಿದೆ. ಹಾಗೆಯೇ ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಜೂನ್ 16, 2019 ಭಾನವಾರದಂದು ನಡೆಸುವುದಾಗಿ ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.