ಪೋಷಕರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಮಕ್ಕಳ ಶಿಕ್ಷಣಕ್ಕಾಗಿ ಖಾಸಗಿ ಶಾಲೆಗಳತ್ತ ಮುಖ ಮಾಡುತ್ತಿದ್ದ ಪೋಷಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯನ್ನು ನೀಡಿದೆ.
ಪ್ರಸಕ್ತ ವರ್ಷದಿಂದಲೇ ಸರ್ಕಾರಿ ಶಾಲೆಗಳಲ್ಲಿ ಪ್ರೀ ನರ್ಸರಿ ತರಗತಿಗಳನ್ನು ಆರಂಭಿಸುವ ಮೂಲಕ ಸರ್ಕಾರಿ ಶಾಲೆಗಳತ್ತ ಪೋಷಕರು ಆಕರ್ಷಿತರಾಗುವಂತೆ ಮಹತ್ತರ ಹೆಜ್ಜೆ ಇಟ್ಟಿದೆ.ತಮ್ಮ ಮಕ್ಕಳ ಪೂರ್ವಪ್ರಾಥಮಿಕ ಶಿಕ್ಷಣಕ್ಕಾಗಿ ಅದರಲ್ಲೂ ಫ್ರೀ ಕೆ.ಜಿ., ಎಲ್.ಕೆ.ಜಿ, ಯುಕೆಜಿಗಳಿಗಾಗಿ ಬಹುತೇಕ ಪಾಲಕರು ಖಾಸಗಿ ಶಾಲೆಗಳಲ್ಲಿಯೇ ಹೆಚ್ಚಾಗಿ ಮಕ್ಕಳನ್ನು ದಾಖಲಿಸುತ್ತಿದ್ದರು. ಇದರಿಂದಾಗಿ ಸರ್ಕಾರಿ ಶಾಲೆಗಳತ್ತ ಮಕ್ಕಳ ಆಕರ್ಷಣೆ ಹಾಗೂ ಪೋಷಕರ ಒಲವು ಕಡಿಮೆಯಾಗುತ್ತಿತ್ತು. ಇದೆಲ್ಲವನ್ನು ಮನಗಂಡ ರಾಜ್ಯ ಸರ್ಕಾರ ಆಯ್ದ 4,100 ಅಂಗನವಾಡಿ ಕೇಂದ್ರಗಳನ್ನು ಪ್ರಾಥಮಿಕ ಶಾಲೆಗಳ ಆವರಣಕ್ಕೆ ಸಿದ್ಧತೆ ನಡೆಸಿದೆ. ಈ ಅಂಗನವಾಡಿ ಕೇಂದ್ರಗಳನ್ನು ಬಾಲ ಸ್ನೇಹಿ‌ಕೇಂದ್ರಗಳನ್ನಾಗಿಸುವ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ದಿಟ್ಟ ಕ್ರಮಕೈಗೊಂಡಿದೆ

Share Post

Leave a Reply

Your email address will not be published. Required fields are marked *

error: Content is protected !!