ಪೊಲೀಸ್ ಕಮೀಷನರ್ ನಿಂದ ವಾಹನ ತಪಾಸಣಾ ಕಾರ್ಯಕ್ರಮ
ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ವತಿಯಿಂದ ಇಂದು ನಗರದಲ್ಲಿ ವಿಶೇಷ ವಾಹನ ತಪಾಸಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು…
ನಗರದಲ್ಲಿ ಸಂಚರಿಸುವ ವಾಹನ ಸವಾರರು ತಮ್ಮ ತಮ್ಮ ವಾಹನದ ದಾಖಲಾತಿಗಳು ಹಾಗೂ ಚಾಲನಾ ಪರವಾನಿಗೆ ಇಲ್ಲದೆ ಹಾಗೂ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಇಲ್ಲದೆ ಸಂಚಾರ ಮಾಡುತ್ತಿದ್ದು, ಇಂತವರ ವಿರುದ್ಧ ಸೂಕ್ತವಾಗಿ ಕ್ರಮ ಕೈಗೊಳ್ಳುವಂತೆ ಪೊಲೀಸ್ ಕಮಿಷನರ್ ವತಿಯಿಂದ ಎಲ್ಲ ಇನ್ಸ್ಪೆಕ್ಟರ್ ಗಳಿಗೆ ಸೂಚನೆ ನೀಡಲಾಗಿತ್ತು ..