ಮಂಡ್ಯದಲ್ಲಿ ಭೀಕರ ರಸ್ತೆ ಅಪಘಾತ, ಸ್ಥಳದಲ್ಲೇ ನಾಲ್ವರ ದುರ್ಮರಣ

ಮಂಡ್ಯ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇರಳ ಮೂಲದ 4 ಮಂದಿ ದುರ್ಮರಣ ಹೊಂದಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.ಬೆಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದಾಗ ಮದ್ದೂರಿನಲ್ಲಿ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಜಯದೀಪ್(29), ಜಿನ್ನಿ(27) ಜ್ಞಾನತೀರ್ಥ(29) ಕಿರಣ್(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Share Post

Leave a Reply

Your email address will not be published. Required fields are marked *

error: Content is protected !!