ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಎಚ್.ವಿಶ್ವನಾಥ್ ರಾಜೀನಾಮೆ!

ಬೆಂಗಳೂರು : ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ಅವರು ಇಂದು ಬೆಳಗ್ಗೆ 11 ಗಂಟೆಗೆ ರಾಜೀನಾಮೆ ಸಲ್ಲಿಸಲು ನಿರ್ಧರಿಸಿದ್ದಾರೆ.

ಈ ಬಗ್ಗೆ ಇಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನಲ್ಲಿ ತಾವು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ತಮ್ಮ ಸ್ಥಾನಕ್ಕೆ ಸ್ವಯಂಪ್ರೇರಿತನಾಗಿ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಘೋಷಿಸಿದರು. ಮಾಜಿ ಸಿಎಂ ಸಿದ್ದರಾಮಯ್ಯನವರ ಒತ್ತಡಕ್ಕೆ ಸಿಲುಕಿ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿಯಲ್ಲೂ ತಮಗೆ ಸಿಗಬೇಕಾಗಿದ್ದ ಸ್ಥಾನ ಸಿಗಲಿಲ್ಲ ಎಂದು ವಿಶ್ವನಾಥ್ ಬಹಳ ದಿನಗಳಿಂದ ಬೇಸರಗೊಂಡಿದ್ದರು.  

ಅಲ್ಲದೆ ಕೆಆರ್ ನಗರ ವಿಧಾನಸಭಾ ಕ್ಷೇತ್ರದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ತಮಗೆ ಆಪ್ತರಾಗಿದ್ದ ಜೆಡಿಎಸ್ ಮುಖಂಡನಿಗೆ ಟಿಕೆಟ್ ನೀಡಲು ಸಚಿವ ಸಾ.ರಾ.ಮಹೇಶ್ ಒಪ್ಪದಿದ್ದರಿಂದ ಅಲ್ಲಿ ಪಕ್ಷ ಆ ಸ್ಥಾನವನ್ನೇ ಫಲಿತಾಂಶದಲ್ಲಿ ಸೋಲು ಕಾಣುವಂತಾಯಿತು ಎಂದು  ವಿಶ್ವನಾಥ್ ತೀವ್ರ ಬೇಸರಗೊಂಡು ಸಚಿವ ಸಾ.ರಾ.ಮಹೇಶ್ ವಿರುದ್ಧ ಬಹಿರಂಗವಾಗೇ ವಾಗ್ದಾಳಿ ನಡೆಸಿದ್ದರು. ನಿನ್ನೆಯಷ್ಟೇ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.

ನಿನ್ನೆ ರಾತ್ರಿಯೇ ಎಚ್.ವಿಶ್ವನಾಥ್ ಅವರು ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಬೆಂಗಳೂರಿನಲ್ಲಿ ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ಕರೆದಿದ್ದಾರೆ ಎಂಬುದಾಗಿ ಖಚಿತ ಮಾಹಿತಿ ಸಿಕ್ಕಿತ್ತು.

Share Post

Leave a Reply

Your email address will not be published. Required fields are marked *

error: Content is protected !!