ಕೋಲಾರ : ಕುಡಿಯುವ ನೀರಿನ ಘಟಕಕ್ಕೆ ಸಂಸದ ಮುನಿಸ್ವಾಮಿ ಶಂಕುಸ್ಥಾಪನೆ

ಕೋಲಾರ : ಯರಗೊಳ್ ನೀರು ಸರಬರಾಜು ಯೋಜನೆಯಡಿಯಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ಹಾಗು ಮಾಲೂರು ನಗರಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗೆ ಬಿಜೆಪಿ ‌ಸಂಸದ ಎಸ್.ಮುನಿಸ್ವಾಮಿ‌ ಹಾಗೂ ಬಂಗಾರಪೇಟೆ ಶಾಸಕ ಎಸ್.ಎನ್‌.ನಾರಾಯಣಸ್ವಾಮಿ ಶಂಕುಸ್ಥಾಪನೆ ನೆರವೇರಿಸಿದರು..

ಬಂಗಾರಪೇಟೆ,ಮಾಲೂರು,ಕೋಲಾರ ನಗರಕ್ಕೆ 13 ದಶಲಕ್ಷ ಲೀಟರ್ ಸಾಮರ್ಥ್ಯದ ಅಂದಾಜು 5 ಕೋಟಿ ವೆಚ್ಚದಲ್ಲಿ ಕುಡಿಯುವ ನೀರಿನ ಶುದ್ಧೀಕರಣ ಘಟಕವನ್ನು ಶಂಕುಸ್ಥಾಪನೆ ಮಾಡಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ಮುನಿಸ್ವಾಮಿ ಸತತ ಬರಗಾಲಕ್ಕೆ ತುತ್ತಾಗಿದ್ದ ಕೋಲಾರ ಜಿಲ್ಲೆಗೆ ಯರಗೊಳ್ ನೀರಾವರಿ ಯೋಜನೆ ಜಿಲ್ಲೆಗೆ ವರದಾನವಾಗಲಿದೆ ಎಂದು ಅಭಿಪ್ರಾಯಪಟ್ಟರು.  ಈ‌ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ಜಿಲ್ಲಾಧ್ಯಕ್ಷ ‌ಕೆ.ಚಂದ್ರಾರೆಡ್ಡಿ ,ಜಿಲ್ಲಾ ಪಂಚಾಯಿತಿ ಸದಸ್ಯ ಮಹೇಶ್,ನಗರಸಭೆ ಸದಸ್ಯರು ಮತ್ತಿತರ ಹಿರಿಯ ಮುಖಂಡರು ಉಪಸ್ಥಿತರಿದ್ದರು.

Share Post

Leave a Reply

Your email address will not be published. Required fields are marked *

error: Content is protected !!