ಜೂನ್ 10ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ

ಬೆಂಗಳೂರು : ಅತ್ಯಂತ ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಜೂನ್ 10 ರಂದು ಸಚಿವ ಸಂಪುಟ ವಿಸ್ತರಣೆ ನಡೆಸುತ್ತೇವೆ ಎಂದು ರಾಜ್ಯಪಾಲ ವಜೂಭಾಯ್ ವಾಲಾ ಅವರಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.  

ಈ ಬಾರಿ ಒಟ್ಟು ನಾಲ್ವರಿಗೆ ಸಚಿವ ಸಂಪುಟ ವಿಸ್ತರಣೆಯಲ್ಲಿ ಅವಕಾಶ ಸಿಗಲಿದೆ ಎಂದು ಮೂಲಗಳು ಸ್ಪಷ್ಟಪಡಿಸಿವೆ. ಇಬ್ಬರು ಪಕ್ಷೇತರ ಶಾಸಕರಾದ ರಾಣೆಬೆನ್ನೂರಿನ ಆರ್.ಶಂಕರ್ ಮತ್ತು ಮುಳಬಾಗಿಲುವಿನ ಎಚ್.ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಅದೇ ರೀತಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳಿಂದ ತಲಾ ಒಬ್ಬರು ಸಚಿವರಾಗಲಿದ್ದಾರೆ.    

ಆದರೆ ಮೈತ್ರಿ ಪಕ್ಷಗಳಿಂದ ಯಾರು ಆ ಇಬ್ಬರು ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿಲ್ಲ. ಹಾಗಾಗಿ ಪ್ರಮಾಣವಚನಕ್ಕೂ ಮುನ್ನವೇ ಆ ಎರಡು ಸ್ಥಾನಗಳಿಗಾಗಿ ಎರಡೂ ಪಕ್ಷಗಳಲ್ಲೂ ಭಾರಿ ಪೈಪೋಟಿ ನಡೆಯುವ ಸಾಧ್ಯತೆ ಹೆಚ್ಚಾಗಿದೆ. ರಾಜಭವನದಲ್ಲಿ ಜೂನ್ 10ರಂದು ನಡೆಯುವ ಸಂಪುಟ ವಿಸ್ತರಣೆಯಲ್ಲಿ ಒಟ್ಟು ನಾಲ್ವರು ಶಾಸಕರಿಗೆ ನೂತನ ಸಚಿವರಾಗಲು ರಾಜ್ಯಪಾಲ ವಜೂಭಾಯ್ ವಾಲಾ ಪ್ರಮಾಣವಚನ ಬೋಧಿಸಲಿದ್ದಾರೆ.    

Share Post

Leave a Reply

Your email address will not be published. Required fields are marked *

error: Content is protected !!