ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ..?; ಕಾಂಗ್ರೆಸ್​ನಲ್ಲಿ ಮಹತ್ವದ ಬದಲಾವಣೆ..!

ನವ ದೆಹಲಿ : ಲೋಕಸಭಾ ಚುನಾವಣೆಯ ನಂತರ ರಾಷ್ಟ್ರೀಯ ಮಟ್ಟದಲ್ಲಿ ಕಾಂಗ್ರೆಸ್​ ಪಕ್ಷದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಎರಡು ದಶಕಗಳ ನಂತರ ಮೊದಲ ಬಾರಿಗೆ ಗಾಂಧಿ ಕುಟುಂಬದ ಹೊರತಾದ ವ್ಯಕ್ತಿ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಏರುವ ಎಲ್ಲಾ ಸಾಧ್ಯತೆಗಳೂ ಎದ್ದು ಕಾಣಿಸುತ್ತಿವೆ. ಅಲ್ಲದೆ ಕರ್ನಾಟಕ ಹಿರಿಯ ನಾಯಕ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ಈ ಸ್ಥಾನಕ್ಕೆ ಪಸ್ತಾಪವಾಗುತ್ತಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತೊಮ್ಮೆ ಹೀನಾಯ ಸೋಲು ಅನುಭವಿಸಿತ್ತು. ಈ ಸೋಲಿನ ಹೊಣೆ ಹೊತ್ತ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಕಾರ್ಯಕಾರಣಿ ಸಭೆಯಲ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಅಲ್ಲದೆ ಹಿಂದುಳಿದ ವರ್ಗದ ವ್ಯಕ್ತಿಯನ್ನು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವಂತೆಯೂ ಸಲಹೆ ನೀಡಿದ್ದರು. ಹೀಗಾಗಿ ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್​ ಪಕ್ಷದ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಎಐಸಿಸಿ ಅಧ್ಯಕ್ಷ ಸ್ಥಾನದ ರೇಸ್​ನಲ್ಲಿ ಮುಂಚೂಣಿಯಲ್ಲಿ ಕೇಳಿಬರುತ್ತಿದೆ.

Share Post

Leave a Reply

Your email address will not be published. Required fields are marked *

error: Content is protected !!