ಕೇಂದ್ರ ಜ್ಞಾನಪೀಠ ಪ್ರಶಸ್ತಿ ವಿಜೇತ ಗಿರೀಶ್ ಕಾರ್ನಾಡ್ ಇನ್ನಿಲ್ಲ

This image has an empty alt attribute; its file name is WhatsApp-Image-2019-06-10-at-10.19.17-AM-1024x678.jpeg
This image has an empty alt attribute; its file name is WhatsApp-Image-2019-06-10-at-10.19.18-AM-1024x680.jpeg
This image has an empty alt attribute; its file name is WhatsApp-Image-2019-06-10-at-10.19.19-AM-1024x678.jpeg
This image has an empty alt attribute; its file name is WhatsApp-Image-2019-06-10-at-10.19.20-AM-1024x691.jpeg
This image has an empty alt attribute; its file name is WhatsApp-Image-2019-06-10-at-10.19.21-AM-1024x686.jpeg
This image has an empty alt attribute; its file name is WhatsApp-Image-2019-06-10-at-10.19.22-AM-1024x673.jpeg
This image has an empty alt attribute; its file name is WhatsApp-Image-2019-06-10-at-10.19.23-AM-1024x679.jpeg
This image has an empty alt attribute; its file name is WhatsApp-Image-2019-06-10-at-10.19.24-AM-1024x689.jpeg
This image has an empty alt attribute; its file name is WhatsApp-Image-2019-06-10-at-10.19.25-AM-1024x667.jpeg
This image has an empty alt attribute; its file name is WhatsApp-Image-2019-06-10-at-10.19.26-AM-1024x667.jpeg

This image has an empty alt attribute; its file name is WhatsApp-Image-2019-06-10-at-10.22.05-AM.jpeg

ಬೆಂಗಳೂರು : ಕೇಂದ್ರ ಜ್ಞಾನಪೀಠ ಪ್ರಶಸ್ತಿ ವಿಜೇತ ಕನ್ನಡದ ಹಿರಿಯ ಸಾಹಿತಿ,ನಟ-ನಿರ್ದೇಶಕ,ರಂಗಭೂಮಿ ಕಲಾವಿದ ಗಿರೀಶ್ ಕಾರ್ನಾಡ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.

ಆವರಿಗೆ 81 ವರ್ಷ ವಯಸ್ಸಾಗಿತ್ತು. ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬೆಂಗಳೂರಿನ ಲ್ಯಾವೆಲ್ಲೆ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಚೇತರಿಸಿಕೊಳ್ಳಲಾಗದೆ ಕೊನೆಯುಸಿರು ಎಳೆದಿದ್ದಾರೆ. 1998ರಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾಗಿರುವ ಕಾರ್ನಾಡ್ ಅವರು ರಾಜ್ಯದ 8 ಜ್ಞಾನಪೀಠ ಪುರಸ್ಕೃತರಲ್ಲಿ ಒಬ್ಬರಾಗಿ ಹೆಸರು ಗಳಿಸಿದವರು. ಗಿರೀಶ್ ಕಾರ್ನಾಡ್ 1938ರ ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು.

ಉತ್ತರ ಕನ್ನಡದ ಶಿರಸಿಯಲ್ಲಿ ಪ್ರಾಥಮಿಕ ಶಿಕ್ಷಣ, ಧಾರವಾಡದ ಬಾಸೆಲ್ ಮಿಷನ್ ಪ್ರೌಢಶಾಲೆಯಲ್ಲಿ ಪ್ರೌಢಶಿಕ್ಷಣ ಹಾಗೂ ಪದವಿ ಶಿಕ್ಷಣವನ್ನು ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಪಡೆದಿದ್ದರು. ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್‌ಶಿಪ್ ಪಡೆದು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಾಂಗ ಮಾಡಿದ್ದರು.

ಗಿರೀಶ್ ಕಾರ್ನಾಡ್ ಎಲ್ಲಾ ಸೀಮೆಗಳನ್ನೂ ಮೀರಿದ ಮಹಾನ್ ಪ್ರತಿಭೆ. ಕನ್ನಡದಲ್ಲಿ ನಾಟಕ ಸಾಹಿತ್ಯಕಾರರಾಗಿ, ಪ್ರಸಿದ್ಧ ರಂಗಭೂಮಿ ತಜ್ಞರಾಗಿ,ನಾಟಕಕಾರರಾಗಿ,ಚಲನಚಿತ್ರರಂಗದ ನಟರಾಗಿ,ನಿರ್ದೇಶಕರಾಗಿ,ಪ್ರಾಚಾರ್ಯರಾಗಿ,ಸಂಗೀತ ನಾಟಕ ಅಕಾಡೆಮಿಗಳ ಅಧ್ಯಕ್ಷರಾಗಿ ಹೀಗೆ ಅವರು ಹಲವು ರಂಗಗಳಲ್ಲಿ ರಾಜ್ಯ,ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧರು.

ಕತೆ, ವಿಮರ್ಶೆ ಮತ್ತು ತಮ್ಮ ಆತ್ಮಕತೆ ‘ಆಡಾಡತ ಆಯುಷ್ಯ’ಗಳನ್ನು ವಿರಳವಾಗಿ ಬರೆದಿದ್ದಾರಾದರೂ ಕನ್ನಡ ಸಾಹಿತ್ಯದಲ್ಲಿ ನಾಟಕ ಕ್ಷೇತ್ರದ ಸಾಹಿತಿ ಎಂದು ಕರೆಯಲ್ಪಡುವ ಗಿರೀಶ್ ಕಾರ್ನಾಡ್, ಕನ್ನಡದಲ್ಲಿ ನಾಟಕ ರಚಿಸುತ್ತಾ ಇತರ ಭಾರತೀಯ ಭಾಷೆಗಳೊಡನೆ ಸಂಪರ್ಕವನ್ನಿಟ್ಟುಕೊಂಡು ನಟರಾಗಿ, ನಿರ್ದೇಶಕರಾಗಿ, ಸಾಂಸ್ಕ್ರತಿಕ ವಕ್ತಾರರಾಗಿ ಕೆಲಸ ಮಾಡಿದವರು.

ಗಿರೀಶ್ ಕಾರ್ನಾಡರು 1934 ಮೇ 19ರಂದು ಮಹಾರಾಷ್ಟ್ರದ ಮಾಥೇರದಲ್ಲಿ ಜನಿಸಿದರು. ಕಾರ್ನಾಡರ ಪ್ರಾಥಮಿಕ ಶಿಕ್ಷಣ ಉತ್ತರಕನ್ನಡದ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ  ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ಪ್ರತಿಷ್ಠಿತ ರೋಡ್ಸ್ ಸ್ಕಾಲರ್ಶಿಪ್ ಪಡೆದುಕೊಂಡು ಆಕ್ಸ್ ಫರ್ಡಿನಲ್ಲಿ ಹೆಚ್ಚಿನ ವ್ಯಾಸಂಗ ಮಾಡಿದರು. ಆಕ್ಸ್ ಫರ್ಡಿನ ಡಿಬೇಟ್ ಕ್ಲಬ್ಬಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಇವರು.  ಮದ್ರಾಸಿನಲ್ಲಿ ನೌಕರಿಯಲ್ಲಿದ್ದ ಇವರು ಶಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಇಂಗ್ಲೆಂಡಿನಲ್ಲಿ ನೆಹರೂ ಸೆಂಟರಿನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಪೂನಾ ಫಿಲ್ಮ್ ಇನ್ಸ್ಟಿಟ್ಯೂಟಿನ ನಿರ್ದೇಶಕರಾಗಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅಧ್ಯಕ್ಷರಾಗಿ ಕೂಡಾ ಅವರು ಕಾರ್ಯನಿರ್ವಹಿಸಿರುವರು.

ಯಯಾತಿ,ತುಘಲಕ್,ಹಯವದನ,ನಾಗಮಂಡಲ,ತಲೆದಂಡ,ಅಗ್ನಿ ಮತ್ತು ಮಳೆ,ಅಂಜುಮಲ್ಲಿಗೆ,ಹಿಟ್ಟಿನ ಹುಂಜ,ಟಿಪ್ಪುವಿನ ಕನಸುಗಳು ಮುಂತಾದವು ಕಾರ್ನಾಡರ ಪ್ರಮುಖ ನಾಟಕ ಕೃತಿಗಳು. ಅಲ್ಲದೆ ಹಲವಾರು ಭಾಷೆಗಳ ಚಲನಚಿತ್ರಗಳಲ್ಲಿ ನಟಿಸಿರುವ ಕಾರ್ನಾಡ್ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ದೇಶಕರೂ ಹೌದು. ವಂಶವೃಕ್ಷ,ತಬ್ಬಲಿಯು ನೀನಾದೆ ಮಗನೆ,ಕಾಡು,ಒಂದಾನೊಂದು ಕಾಲದಲ್ಲಿ,ಕಾನೂರು ಹೆಗ್ಗಡತಿ,ಉತ್ಸವ್ ಮುಂತಾದ ಸಿನಿಮಾಗಳು; ಸೂಫಿ ಪಂಥ,ಕನಕ ಪುರಂದರ ಸಾಕ್ಷಚಿತ್ರಗಳನ್ನು ನಿರ್ದೇಶಿಸಿದ್ದಾರೆ. ನಾಟಕ ಸಾಹಿತ್ಯ ರಚನೆಗೆ ಜ್ಞಾನಪೀಠ ಪ್ರಶಸ್ತಿ ಪಡೆದ ಕಾರ್ನಾಡರು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಗುಬ್ಬಿ ವೀರಣ್ಣ ಪ್ರಶಸ್ತಿ, ಪದ್ಮಶ್ರೀ, ಪದ್ಮಭೂಷಣ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಹಾಗೂ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!