ಇಬ್ಬರು ಪಕ್ಷೇತರ ಶಾಸಕರು ನಾಳೆ ಸಚಿವರಾಗಿ ಪ್ರಮಾಣವಚನ ಸ್ವೀಕಾರ

ಬೆಂಗಳೂರು:ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಾಳೆ ನಡೆಯಲಿದ್ದು, ಪಕ್ಷೇತರ ಶಾಸಕರಿಬ್ಬರು ನೂತನ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಜಭವನದ ಗಾಜಿನಮನೆಯಲ್ಲಿ ನಾಳೆ ಮಧ್ಯಾಹ್ನ 1 ಗಂಟೆಗೆ ನೂತನ ಸಚಿವರ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದ್ದು, ರಾಜ್ಯಪಾಲ ವಜೂಭಾಯಿ ವಾಲಾ ಅವರು ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣವಚನವನ್ನು ಬೋಧಿಸಲಿದ್ದಾರೆ.

ಪಕ್ಷೇತರ ಶಾಸಕರಾದ ಶಂಕರ್ ಹಾಗೂ ನಾಗೇಶ್ ಅವರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಪ್ರಸ್ತುತ ಮೂರು ಸಚಿವ ಸ್ಥಾನಗಳು ಖಾಲಿ ಉಳಿದಿವೆ. ಎರಡು ಜೆಡಿಎಸ್ ಪಾಲಿನ ಸಚಿವ ಸ್ಥಾನಗಳಾದರೆ, ಒಂದು ಕಾಂಗ್ರೆಸ್‍ನ ಪಾಲಿನದಾಗಿದೆ.

Share Post

Leave a Reply

Your email address will not be published. Required fields are marked *

error: Content is protected !!