“ವಿಶ್ವ ರಕ್ತದಾನಿಗಳ ದಿನ”ದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ

ಚಾಮರಾಜನಗರ : ಜೆ.ಎಸ್.ಬಿ ಪ್ರತಿಷ್ಠಾನ ಇವರ ವತಿಯಿಂದ ಚಾಮರಾಜನಗರ ಜಿಲ್ಲಾ ರಕ್ತನಿಧಿ ಘಟಕದ ಸಹಯೋಗದೊಂದಿಗೆ ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಶುಕ್ರವಾರ ನಗರದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ಆಯೋಜಿಸಲಾಗಿದೆ.

          ನಗರದ ಜಿಲ್ಲಾಸ್ಪತ್ರೆಯ ರಕ್ತ ನಿಧಿ ಘಟಕದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು ಹೆಚ್ಚಿನ ಸಂಖ್ಯೆಯಲ್ಲಿ ದಾನಿಗಳು ಭಾಗವಹಿಸಬೇಕೆಂದು ಜೆಎಸ್‌ಬಿ ಪ್ರತಿಷ್ಠಾನದ ಅಧ್ಯಕ್ಷ ಶಶಿಕುಮಾರ್ ಮನವಿ ಮಾಡಿದ್ದಾರೆ.

ನಮ್ಮ ಜಿಲ್ಲೆಯಲ್ಲಿ ಸ್ವಯಂಪ್ರೇರಿತವಾಗಿ ರಕ್ತ ನೀಡುವವರು ಬಹಳ ಕಡಿಮೆ ಪ್ರಮಾಣದಲ್ಲಿದ್ದಾರೆ. ನಮಗೆ ವಾರ್ಷಿಕ ಸುಮಾರು ಮೂರು  ಸಾವಿರ ಯುನಿಟ್ ರಕ್ತದ ಅವಶ್ಯಕತೆಯಿದೆ. ಆದರೆ ಎರಡು ಸಾವಿರ ಯುನಿಟ್ ಮಾತ್ರ ಲಭ್ಯವಾಗುತ್ತಿದೆ. ಉಳಿದ ಒಂದು ಸಾವಿರ ಯುನಿಟ್ ರಕ್ತವನ್ನು ಮೈಸೂರು,ಬೆಂಗಳೂರುಗಳಿಂದ ತರಿಸಿಕೊಳ್ಳಲಾಗುತ್ತಿದೆ. ಹೀಗಾಗಿ ನಮ್ಮ ಜಿಲ್ಲೆಯ ಜನರು ಸ್ವಯಂಪ್ರೇರಣೆಯಿಂದ ರಕ್ತ ನೀಡಲು ಮುಂದಾದರೆ ರಕ್ತದ ಕೊರತೆ ನೀಗಿಸಲು ಸಹಾಯವಾಗುತ್ತದೆ ಎಂದು ಅವರು ಮನವಿ ಮಾಡಿದ್ದಾರೆ. ಅಲ್ಲದೇ 25ಕ್ಕಿಂತ ಹೆಚ್ಚಿನ ಬಾರಿ ರಕ್ತದಾನ ಮಾಡಿರುವವರಿಗೆ ವಿಶೇಷ ಸನ್ಮಾನ ಇರುತ್ತದೆಂದು ಅವರು ತಿಳಿಸಿದ್ದಾರ

Share Post

Leave a Reply

Your email address will not be published. Required fields are marked *

error: Content is protected !!