ಬಾಗಲಕೋಟೆ : ಜಿಂದಾಲ್ ಕಂಪೆನಿಗೆ ಭೂಮಿ ಮಾರಾಟ ಖಂಡಿಸಿ ಬಿಜೆಪಿ ಪ್ರತಿಭಟನೆ

ಬಾಗಲಕೋಟ : ಜಿಂದಾಲ್ ಕಂಪನಿಗೆ ಭೂಮಿ ಮಾರಾಟ ಮಾಡುವ ರಾಜ್ಯಸರ್ಕಾರದ ನಿರ್ಧಾರ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಜಿಂದಾಲ್ ಕಂಪನಿಗೆ ರಾಜ್ಯಸರ್ಕಾರ 3,667 ಎಕರೆ ಜಮೀನು ನೀಡುವ ವಿವಾದಾತ್ಮಕ ತೀರ್ಮಾನವನ್ನು ತೆಗೆದುಕೊಂಡಿದೆ. ರಾಜ್ಯಸರ್ಕಾರದ ಈ ನಿರ್ಧಾರವು ಸುಳ್ಳು ಭರವಸೆ. ಈ ಮೂಲಕ ನಾಡಿನ ಜನರ ದಿಕ್ಕು ತಪ್ಪಿಸಿ, ನೂರಾರು ವೈಫಲ್ಯಗಳಿಗೆ ಕಾರಣವಾಗಿದೆ ಎಂದು ಸರ್ಕಾರದ ವಿರುದ್ಧ ಬಾಗಲಕೋಟ ಜಿಲ್ಲಾ ಬಿಜೆಪಿ ಯುವ ಮೋರ್ಚಾ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ರಾಜು ನಾಯ್ಕರ ಅವರ ನೇತೃತ್ವದಲ್ಲಿ ನೂರಾರು ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾಡಳಿತ ಕಚೇರಿ ಮುಂದೆ ಪ್ರತಿಭಟನೆ ಮಾಡಿ ಯಾವುದೇ ಕಾರಣಕ್ಕೂ ಜಿಂದಾಲ್ ಕಂಪನಿಗೆ ರಾಜ್ಯಸರ್ಕಾರ ಭೂಮಿಯನ್ನು ನೀಡಬಾರದು, ಮೈತ್ರಿ ಸರ್ಕಾರ ಸುಳ್ಳು ಭರವಸೆ ನೀಡುವ ಮೂಲಕ ನಾಡಿನ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಆರೋಪಿಸಿ ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಾಜ್ಯಸರ್ಕಾರ ಜಿಂದಾಲ್ ಕಂಪನಿಗೆ ಭೂಮಿ ನೀಡಬಾರದು ಎಂದು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಈ ಮೂಲಕ ಮನವಿ ಪತ್ರ ಸಲ್ಲಿಸಿದರು.

Share Post

Leave a Reply

Your email address will not be published. Required fields are marked *

error: Content is protected !!