ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿ-3 ಸಾವು

ದೇವನಹಳ್ಳಿ : ಬೈಕ್ ಡಿಕ್ಕಿಯಾಗುತ್ತಿರುವುದನ್ನು ತಪ್ಪಿಸಲು ಹೋಗಿ ಹೆದ್ದಾರಿಯಲ್ಲಿ ಇನ್ನೋವಾ ಕಾರು ಪಲ್ಟಿಯಾದ ಕಾರಣ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿ ತಾಲ್ಲೂಕಿನ ಕನ್ನಮಂಗಲಪಾಳ್ಯ ಗೇಟ್ ಬಳಿ ನಡೆದಿದೆ.

ಅಪಘಾತದಲ್ಲಿ ಇನ್ನೋವಾ ಕಾರಿನಲ್ಲಿದ್ದ ಇತರ ಇಬ್ಬರಿಗೆ ಗಂಭೀರ ಗಾಯವಾಗಿದೆ. ಬೆಂಗಳೂರು-ಹೈದರಾಬಾದ್ ರಾಷ್ಟ್ರಿಯ ಹೆದ್ದಾರಿ 7 ರಲ್ಲಿ ಈ ಅವಘಡ ಸಂಭವಿಸಿದೆ. ರಸ್ತೆಯಲ್ಲಿ ಅಡ್ಡಬಂದ ಪಲ್ಸರ್ ಬೈಕ್ ತಪ್ಪಿಸಲು ಹೋಗಿ ಇನ್ನೋವಾ ಕಾರು ಪಲ್ಟಿಯಾಗಿದೆ. ಮೃತರಾದ ಮೂವರ ಗುರುತು ಇನ್ನೂ ಪತ್ತೆಯಾಗಿಲ್ಲ. KA 53 N 6789 ಸಂಖ್ಯೆಯೆ ಇನ್ನೋವಾ ಕಾರು ಮತ್ತು KA 40 EB 3963 ಸಂಖ್ಯೆಯೆ ಬೈಕ್ ನಡುವೆ ಈ ಅಪಘಾತ ಸಂಭವಿಸಿದೆ. ಏರ್ ಪೋರ್ಟ್ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share Post

Leave a Reply

Your email address will not be published. Required fields are marked *

error: Content is protected !!