ಬಿಜೆಪಿಯಿಂದ ಪ್ರೆಸ್ ನೋಟ್ ರಿಲೀಸ್ : ಸಿಎಂ ಕುಮಾರಸ್ವಾಮಿ ರಾಜಿನಾಮೆಗೆ ಆಗ್ರಹ

ಬೆಂಗಳೂರು : ಮಾಜಿ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಇಂದು ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪ್ರಸ್ತುತ ರಾಜಕೀಯ ಪರಿಸ್ಥಿತಿಯ ಕುರಿತು ಅವಲೋಕನ ನಡೆಸಲಾಗಿದೆ ಎನ್ನಲಾಗಿದೆ.
ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಸಮ್ಮಿಶ್ರ ಸರ್ಕಾರ ಯಾವುದೇ ರೀತಿಯಲ್ಲಿ ಸ್ಪಂದಿಸದೆ ಜನರ ಸಮಸ್ಯೆಗಳಿಗೆ ಪ್ರತಿಕ್ರಿಯಿಸದೇ
ಬಿಜೆಪಿಯನ್ನು ದೂರುವುದು ಬಿಟ್ಟರೆ ಅಧಿಕಾರ É್ಕ ಬಂದಾಗಿನಿಂದಲೂ ಬೇರಾವುದೇ ಸಾಧನೆ ಮಾಡಿಲ್ಲ ಎಂದು ಬಿಜೆಪಿ ಅಭಿಪ್ರಾಯಪಟ್ಟಿದೆ.
ಈಗಲೂ ಸಹ ಬಿಜೆಪಿ ಸಮ್ಮಿಶ್ರ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಮಾಡುವುದಿಲ್ಲ. ಕಾಂಗ್ರೆಸ್ ನಾಯಕ
ಸಿದ್ದರಾಮಯ್ಯ ಅವರು ಆರೋಪಿಸಿದಂತೆ ಅವರ ಶಾಸಕರುಗಳಿಗೆ ಬಿಜೆಪಿ ಯಾವುದೇ ಆಮಿಷ ಒಡ್ಡಿಲ್ಲ. ರಾಜಕೀಯ ಪರಿಸ್ಥಿತಿ ಸುಧಾರಿಸದೇ, ಸರ್ಕಾರ ತಾನಾಗಿಯೇ ಪತನಗೊಳ್ಳುವ ಹಂತ ತಲುಪಿದೆ. ಬಿಜೆಪಿ ಇನ್ನೂ ಎರಡ್ಮೂರು
ದಿನಗಳ ಕಾಲ ಕಾದು ನೋಡುತ್ತದೆ. ಪರಿಸ್ಥಿತಿಯನ್ನು ಅವಲೋಕಿಸಿ ನಾಳೆ ಸಂಜೆ ಮತ್ತೊಮ್ಮೆ ಶಾಸಕಾಂಗ ಪಕ್ಷದ ಸಭೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಅರವಿಂದ ಲಿಂಬಾವಳಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ನಾಳೆ ರಾಜ್ಯಾದ್ಯಂತ ಪ್ರತಿಭಟನೆ :
ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆ ನೀಡುತ್ತಾರೆಂದು ನಾವು ಕಾದಿದ್ದೇವೆ. ಅಲ್ಪಮತಕ್ಕೆ ಕುಸಿದಿರುವ ಸರ್ಕಾರದ ರಾಜೀನಾಮೆಗೆ ಆಗ್ರಹಿಸಿ, ಮಂಗಳವಾರ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ ಎಂದವರು ಹೇಳಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!