ನಾಲ್ಕಂತಸ್ತಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಅತ್ಮಹತ್ಯೆ : ಸಾವಿನ ಶಂಕೆ ನಿಗೂಢ

ಬಾಗಲಕೋಟೆ : ಜಿಲ್ಲೆಯ ಜಮಖಂಡಿಯ ನಗರದಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯದ ನಾಲ್ಕಂತಸ್ತಿನ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಜಮಖಂಡಿ ನಗರದಲ್ಲಿ ನಡೆದಿದೆ.
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ಚಿಮ್ಮಡ ಗ್ರಾಮದ ನಿವಾಸಿ ಪ್ರಿಯಾಂಕಾ ಮೇತ್ರಿ(17) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.
ಶಾಸಕ ಆನಂದ ನ್ಯಾಮಗೌಡ ಒಡೆತನದ ರಾಯಲ ಪ್ಯಾಲೇಸ್ ಕಾಲೇಜಿನಲ್ಲಿ ದ್ವೀತಿಯ ಪಿಯುಸಿ ವಿದ್ಯಾಭ್ಯಾಸ ಮಾಡುತ್ತಿದ್ದ ವಿದ್ಯಾರ್ಥಿನಿ ಕಾಲೇಜಿನದ್ದೇ ವಸತಿ‌ ನಿಲಯದಲ್ಲಿ ವಾಸಿಸುತ್ತಿದ್ದಳು. ಕಳೆದ ತಡ ರಾತ್ರಿ ವಸತಿ ನಿಲಯದ ನಾಲ್ಕನೇ ಮಹಡಿಗೆ ತೆರಳಿ ಅಲ್ಲಿಂದ ಹಾರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿಷಯ ತಿಳಿದು ಸ್ಥಳಕ್ಕೆ ಬಂದ ಆಕೆಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಜಮಖಂಡಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.

-ಪ್ರಕಾಶ ಕುಂಬಾರ, ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!