ಲಾರಿ ಮತ್ತು ಕಾರ್ ನಡುವೆ ಡಿಕ್ಕಿ : ವೃದ್ಧೆ ಸಾವು, ಮೂವರಿಗೆ ಗಾಯ

ಹುಬ್ಬಳ್ಳಿ : ಕಾರ್‌ನ ಚಕ್ರ ಬಸ್ಟ್ ಆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರು ಲಾರಿಯೊಂದಕ್ಕೆ ಡಿಕ್ಕಿಯಾಗಿ ಓರ್ವ ಮೃತಪಟ್ಟು ಮೂವರಿಗೆ ಗಾಯಗಳಾಗಿರುವ ಘಟನೆ ಹುಬ್ಬಳ್ಳಿಯ ಗಬ್ಬೂರು ಬೈಪಾಸ್‌ನಲ್ಲಿ ನಡೆದಿದೆ.
ಹಾವೇರಿಯಿಂದ ಧಾರವಾಡದ ಕಡೆ ಹೋಗುತ್ತಿದ್ದ ಮಾರ್ಗಮಧ್ಯೆ ಸಿಗುವ ಗಬ್ಬೂರ್ ಬೈಪಾಸ ಬಳಿ ಏಕಾಏಕಿ ಕಾರಿನ ಚಕ್ರ ಪಂಚರ್ ಆಗಿದೆ. ಇದರಿಂದ ನಿಯಂತ್ರಣ ತಪ್ಪಿದ ಕಾರು ಚಲಿಸುತ್ತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು. ಡಿಕ್ಕಿ ಹೊಡೆದ ರಭಸಕ್ಕೆ ಕಾರ್‌ನ ಮುಂಭಾಗ ಸಂಪೂರ್ಣ ಜಖಂ ಗೊಂಡಿದ್ದು ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ಆ ಪೈಕಿ ಓರ್ವ ವೃದ್ಧೆ ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಹುಬ್ಬಳ್ಳಿ ದಕ್ಷಿಣ ವಿಭಾಗ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗಾಯಾಳುಗಳನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಈ ಸಂಬಂಧ ದಕ್ಷಿಣ ವಿಭಾಗದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ವಿನಾಯಕ ಹಡಗಲಿ, ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!