ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ : ದಿನೇಶ್ ಗುಂಡೂರಾವ್

ಬೆಂಗಳೂರು : ಇವತ್ತು ಸ್ಪೀಕರ್ ಮುಂದೆ ವಿಚಾರಣೆ ಆಗಿರುವುದು ಹಳೆ ಅರ್ಜಿಗಳಾಗಿದ್ದು ನಾಲ್ವರನ್ನು ಅನರ್ಹ ಮಾಡಿ ಅಂತ ಸಲ್ಲಿಸಿದ್ದ ಅರ್ಜಿಗಳಾಗಿವೆ. ಇದರೊಂದಿಗೆ ರಾಜ್ಯದ ಸಮ್ಮಿಶ್ರ ಸರ್ಕಾರ ಸುಭದ್ರವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೆಕೆ. ಗೆಸ್ಟ್ ಹೌಸ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಎಂದಿದ್ದಾರೆ. ಉಮೇಶ್ ಜಾದವ್ ಹೊರತುಪಡಿಸಿ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ ವಿರುದ್ಧ ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಕ್ರಮಕ್ಕೆ ಒತ್ತಾಯ ಮಾಡಿದ್ದೇವೆ. ದೇಶಕ್ಕೆ ಒಂದು ಸಂದೇಶ ರವಾನೆ ಮಾಡಬೇಕು. ಒಂದು ಪಕ್ಷದ ಬಿಫಾರಂ ಪಡೆದು ಮತ್ತೊಂದು ಪಕ್ಷಕ್ಕೆ ಹೋಗುವವರಿಗೆ ಕಡಿವಾಣ ಹಾಕಬೇಕಾಗಿದ್ದು ರಾಜ್ಯದ ಜನರು ಸಹ ಇದನ್ನೇ ಬಯಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಅನರ್ಹತೆಯ ಅರ್ಜಿ ವಿಚಾರಣೆಯನ್ನು ಸ್ಪೀಕರ್ ನಡೆಸಿದ್ದಾರೆ. ಎಲ್ಲ ವಿಚಾರಗಳನ್ನ ನಾನು ಮಾಧ್ಯಮಗಳ ಮುಂದೆ ಹೇಳಲು ಆಗುವುದಿಲ್ಲ. ಬಿಜೆಪಿ ನಾಯಕರಿಗೆ ಸಂಖ್ಯಾ ಬಲ ಇದ್ರೆ ಯಾಕೆ ಅವಿಶ್ವಾಸ ನಿರ್ಣಯ ಮಂಡನೆ ಮಾಡ್ತೀವಿ ಅಂತ ಹೇಳುತ್ತಿಲ್ಲ. ಬಿಜೆಪಿಯವರಿಗೆ ಆ ದೈರ್ಯ ಇಲ್ಲ. ನಾವೇ ವಿಶ್ವಾಸ ನಿರ್ಣಯ ಮಂಡನೆ ಮಾಡಿ ಸಾಬೀತುಪಡಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!