ಶಾಸಕ ಮಹೇಶ್ ಕುಮಠಳ್ಳಿ ಮನೆಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಮುತ್ತಿಗೆ ಯತ್ನ

ಅಥಣಿ : ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಥಣಿ ಶಾಸಕ ಮಹೇಶ್ ಕುಮಠಳ್ಳಿ ಮನೆಗೆ ಮುತ್ತಿಗೆ ಹಾಕಲು ಯತ್ನಸಿದ ಘಟನೆ ನಡೆದಿದೆ.
ಕಾಂಗ್ರೆಸ್ ಪಕ್ಷದಿಂದ ಗೆದ್ದಿದ್ದ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಠಳ್ಳಿ ರಾಜೀನಾಮೆ ನೀಡಿರುವ ಹಿನ್ನಲೆಯಲ್ಲಿ ಕಾರ್ಯಕರ್ತರು ತೀರಾ ಅದಮಾಧಾನ ತೋರಿಸುತ್ತಿದ್ದು ಶಾಸಕರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಈ ವೇಳೆ ಶಾಸಕರ ಮನೆಯಿಂದ ಐವತ್ತು ಮೀಟರ್ ದೂರದಲ್ಲೇ ಬ್ಯಾರಿಕೇಡ್ ಹಾಕಿದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರನ್ನು ತಡೆದಿದ್ದಾರೆ. ಧರಣಿ ನಡೆಸಿದ ಪೊಲೀಸರು ರಾಜೀನಾಮೆ ವಾಪಸ್ ಪಡೆದು ಕ್ಷೇತ್ರದ ಜನರ ಸಂಕಷ್ಟಗಳಿಗೆ ಸ್ಪಂದಿಸುವಂತೆ ಆಗ್ರಹಿಸಿದರು. ಮಹೇಶ್ ಕುಮಠಳ್ಳಿ ಮರಳಿ ಬನ್ನಿ, ಬಿಜೆಪಿ ಷಡ್ಯಂತ್ರಕ್ಕೆ ಧಿಕ್ಕಾರ ಎನ್ನುವ ಘೋಷಣೆ ಕೂಗಿದ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

-ವಿಲಾಸ ಕಾಂಬಳೆ ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!