ಬಿಜೆಪಿಯಿಂದ ಅಧಿಕಾರ ದುರ್ಬಳಕೆ ಆರೋಪ ಕಾಂಗ್ರೆಸ್ ಪ್ರತಿಭಟನೆ

ಕೋಲಾರ : ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಬಿಜೆಪಿಯು ಇಡಿ ಹಾಗೂ ಸಿಬಿಐ
ಅಧಿಕಾರ ದುರ್ಬಳಕೆ ಮಾಡಿಕೊಂಡು ಶಾಸಕರನ್ನು ಬಲವಂತವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ನಗರರದಲ್ಲಿ ಕಾಂಗ್ರೆಸ್ ಜಿಲ್ಲಾ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಬಿಜೆಪಿ ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಛಿದ್ರ ಮಾಡಿ ಶಾಸಕರನ್ನು ಬ್ಲಾಕ್‌ಮೇಲ್ ಮಾಡಿ‌ ಬಲವಂತವಾಗಿ ಅವರನ್ನು ವಶದಲ್ಲಿ ಇಟ್ಟುಕೊಂಡು ಸರ್ಕಾರದ ಪತನಕ್ಕೆ ಹವಣಿಸುತ್ತಿದೆ. ಬಿಜೆಪಿಯ ವಾಮಮಾರ್ಗ ನಡೆದುಕೊಳ್ಳುತ್ತಿರುವುದು ರಾಜ್ಯದ ಜನತೆಗೆ ಗೊತ್ತಾಗಿದೆ. ಬಿಜೆಪಿ ಈ ನಡವಳಿಕೆಯ ವಿರುದ್ಧ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದಲ್ಲಿ ಹಾಲಿ, ಮಾಜಿ ಶಾಸಕರು ಹಾಗೂ ಸಂಸದರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳುವ ಬಗ್ಗೆ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಾರೆಡ್ಡಿ ತಿಳಿಸಿದ್ದಾರೆ.

ಲಕ್ಷ್ಮಿಪತಿ, ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!