ದಳ್ಳಾಳಿಗಳ ಹಾವಳಿ ತಪ್ಪಿಸುವಂತೆ ಆಗ್ರಹಿಸಿ ರೈತ ಸಂಘ ಪ್ರತಿಭಟನೆ

ಕೋಲಾರ : ಕೋಟ್ಯಾಂತರ ಹಣ ವ್ಯಯಿಸಿ ನಿರ್ಮಿಸಿರುವ ಸರ್ಕಾರಿ ಕಛೇರಿಗೆ ಉಪನೊಂದಣಾಧಿಕಾರಿಗಳ ಕಛೇರಿಯನ್ನು ಸ್ಥಳಾಂತರಿಸಿ ಹೆಜ್ಜೆ ಹೆಜ್ಜೆಗೂ ಜನ ಸಾಮಾನ್ಯರ ರಕ್ತ ಹೀರುತ್ತಿರುವ ದಳ್ಳಾಳಿಗಳ ಹಾವಳಿಯನ್ನು ತಪ್ಪಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಕೋಲಾರ ನಗರದ ಉಪನೊಂದಣಾಧಿಕಾರಿ ಮುಂಭಾಗ ಪ್ರತಿಭಟನೆ ನಡೆಸಿದರು.
ಜಿಲ್ಲೆಯ ಜನರಿಂದ ಬರುವ ತೆರಿಗೆ ಹಣವನ್ನು ರಾಜಾರೋಷವಾಗಿ ಪೋಲು ಮಾಡುತ್ತಿದ್ದಾರೆ. ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ಸುಸಜ್ಜಿತವಾದ ಜಿಲ್ಲಾಡಳಿತ ಭವನ ಕಟ್ಟಡವನ್ನು ಜನ ಸಾಮಾನ್ಯರಿಗೆ ತೊಂದರೆಯಾಗಬಾರದು ಎಂದು ನಿರ್ಮಿಸಲಾಗಿದೆ. ಜಿಲ್ಲಾಡಳಿತ ಭವನ ನಿರ್ಮಿಸಿ ಎರಡು ವರ್ಷ ಕಳೆದರು ಕೆಲವು ಇಲಾಖೆಗಳು ಬಾಡಿಕೆ ಕಟ್ಟಡದಲ್ಲಿ ಮುಂದುವರೆಯುತ್ತಿದ್ದು ಜನ ಸಾಮಾನ್ಯರ ತೆರಿಗೆ ಹಣವನ್ನು ಪೋಲು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಅದ್ದರಿಂದ ಈ ಕೂಡಲೇ ಜಿಲ್ಲಾಡಳಿ ಭವನಕ್ಕೆ ಉಪನೊಂದಣಾಧಿಕಾರಿಗಳ ಕಛೇರಿಯನ್ನು ವರ್ಗಾವಣೆ ಮಾಡಿ ‌ಖಾಸಗಿಯವರಿಗೆ ನೀಡುವ ಬಾಡಿಕೆ ಹಣಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಉಪನೊಂದಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಲಕ್ಷ್ಮಿಪತಿ, ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!