ಟಾಟಾ ಏಸ್ ಪಲ್ಟಿ : ಇಬ್ಬರು ಸಾವು, ನಾಲ್ವರಿಗೆ ಗಾಯ

ಮುಳಬಾಗಿಲು : ಕೂಲಿ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟಾಟಾ ಏಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದು ನಾಲ್ವರಿಗೆ ಗಾಯಗೊಂಡ ಘಟನೆ ತಾಲ್ಲೂಕಿನ ಚೊಕ್ಕದೊಡ್ಡಿ ಕ್ರಾಸ್‌ ಬಳಿ‌ ನಡೆದಿದೆ.

ಪಾರ್ವತಮ್ಮ(35), ರೆಡ್ಡಮ್ಮ (32) ಅಪಘಾತದಲ್ಲಿ ಮೃತಪಟ್ಟ ದುರ್ದೈವಿಗಳು. ಇನ್ನು ನಾಲ್ವರು ಗಾಯಾಳುಗಳನ್ನು ಕೋಲಾರದ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ.

ಅತಿವೇಗವೇ ಅವಘಡಕ್ಕೆ ಕಾರಣ ಎನ್ನಲಾಗಿದ್ದು ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ ಹೊಡೆದಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!