ಅಕ್ರಮ ಹಸು ಸಾಗಾಣಿಕೆ : ಎರಡು ಗುಂಪುಗಳ ನಡುವೆ ಘರ್ಷಣೆ

ದಾವಣಗೆರೆ : ಅಕ್ರಮವಾಗಿ ಹಸು ಸಾಗಾಣಿಕೆ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಗುಂಪೊಂದು ಹಲ್ಲೆ ಮಾಡಿರುವ ಘಟನೆ ನಗರದ ಕಾಳಿಕಾದೇವಿ ರಸ್ತೆಯಲ್ಲಿ ನಡೆದಿದೆ.

ಹಸು ಸಾಗಿಸುತ್ತಿದ್ದ ಗೂಡ್ಸ್ ಆಟೋವನ್ನು ತಡೆದು ನಿಲ್ಲಿಸಿದ ಯುವಕರ ಗುಂಪೊಂದು ಚಾಲಕನನ್ನು ಪ್ರಶ್ನಿಸಿದ್ದಾರೆ. ಬಳಿಕ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿದ ಆಟೋ ಚಾಲಕನ ಕಡೆಯ ಮತ್ತೊಂದು ಗುಂಪು ಸ್ಥಳಕ್ಕೆ ಬಂದಿದೆ. ಈ ವೇಳೆ ಎರಡೂ ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು.

ಘರ್ಷಣಾ ಸ್ಥಳಕ್ಕಾಗಮಿಸಿದ ಬಸವನಗರ ಪೋಲಿಸರು ಪರಿಸ್ಥಿತಿ ನಿಯಂತ್ರಿಸಲು ಹರಸಾಹಸಪಟ್ಟರು. ಬಳಿಕ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

  • ಕರಿಬಸವರಾಜು, ದಿ ನ್ಯೂಸ್24 ಕನ್ನಡ
Share Post

Leave a Reply

Your email address will not be published. Required fields are marked *

error: Content is protected !!