ಬೈಕ್ ರೇಸಿಂಗ್ ಮಾಡುತ್ತಿದ್ದ ಯುವಕರಿಗೆ ದಂಡದ ಬಿಸಿ ಮುಟ್ಟಿಸಿದ ಪೊಲೀಸರು

ಕೋಲಾರ : ಹೆದ್ದಾರಿಯಲ್ಲಿ ಬೈಕ್ ರೇಸಿಂಗ್ ಮಾಡುತ್ತಿದ್ದ ಯುವಕರಿಗೆ ದಂಡ ಹಾಕುವ ಮೂಲಕ ಗ್ರಾಮಾಂತರ ಠಾಣೆ ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.

ನಗರದ ಹೊರವಲಯದ ಕೊಂಡರಾಜನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ಅತಿ ವೇಗವಾಗಿ ಬೈಕ್ ರೇಸಿಂಗ್ ಮಾಡುತ್ತಿದ್ದ ಯುವಕರಿಗೆ ಇಂದು ಪೊಲೀಸರು ಶಾಕ್ ನೀಡಿದರು. ರೇಸಿಂಗ್ ಮಾಡುತ್ತಿದ್ದ 20 ಕ್ಕೂ ಹೆಚ್ಚು ಬೈಕ್ ಸವಾರರಿಗೆ ದಂಡ ವಿಧಿಸಿ ಬಿಸಿ ತಾಕಿಸಿದ ಪೊಲೀಸರು ಒಟ್ಟು ಏಳು ಸಾವಿರಕ್ಕೂ ಹೆಚ್ಚು ದಂಡ ವಿಧಿಸಿದ್ದಾರೆ.

ಭಾನುವಾರ ರಜೆ ಹಿನ್ನೆಲೆ ಬೈಕ್ ರೇಸಿಂಗ್ ಮಾಡಲು ಯುವಕರು ಬೆಂಗಳೂರಿನಿಂದ ಕೋಲಾರ ರಾಷ್ಟ್ರೀಯ ಹೆದ್ದಾರಿಗೆ ಬಂದಿದ್ದರು. ರೇಸಿಂಗ್ ಮಾಡುವ ಯುವಕರಿಂದ ಹೆದ್ದಾರಿಯಲ್ಲಿ ಇತರ ವಾಹನ ಸವಾರರಿಗೆ ಕಿರಿಕಿರಿಯಾಗುತ್ತಿದ್ದ ಬಗ್ಗೆ ಸಾಕಷ್ಟು ಆರೋಪಗಳು ಕೇಳಿ ಬಂದಿದ್ದವು.

ಈ ಹಿನ್ನಲೆಯಲ್ಲಿ ರೇಸಿಂಗ್ ಮಾಡುತ್ತಿದ್ದ ಬೈಕ್ ಗಳನ್ನು ತಡೆದು ದಾಖಲೆ ಪರಿಶೀಲನೆ ನಡೆಸಿ ದಂಡ ವಿಧಿಸಿದ ಪೊಲೀಸರು ಸಾರ್ವಜನಿಕರಿಗೆ ತೊಂದರೆಯಾಗುವಂತೆ ನಡೆದುಕೊಳ್ಳದಂತೆ ಎಚ್ಚರಿಕೆ ನೀಡಿದರು.

ಲಕ್ಷ್ಮೀಪತಿ, ದಿ ನ್ಯೂಸ್24 ಕನ್ನಡ

Share Post

Leave a Reply

Your email address will not be published. Required fields are marked *

error: Content is protected !!