ಕುಡಿದ ನಶೆಯಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಗೋಕಾಕ್ : ಕುಡಿದ ಅಮಲಿನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾದ ಘಟನೆ ಕೊಣ್ಣೂರು ಪಟ್ಟಣದಲ್ಲಿ ನಡೆದಿದೆ.

ಇಮ್ತಿಯಾಜ್‌ದಾದು ಮುಲ್ಲಾ(42) ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯಾಗಿದ್ದಾನೆ. ಈತ ಕೊಣ್ಣೂರಿನ ಮದ್ಯ ಇರುವ ಶಾ ಹುಸೇನ ದರ್ಗಾದ ಬಳಿ ತೆರಳಿದ್ದನು. ಕಂಠಪೂರ್ತಿ ಕುಡಿದು ನಶೆಯಲ್ಲಿದ್ದ ವ್ಯಕ್ತಿ ಇದ್ದಕ್ಕಿದ್ದಂತೆ ಬಾವಿಯಲ್ಲಿ ಇಳುಗಿ ನೇಣು ಬಿಗಿದುಕೊಂಡಿದ್ದಾನೆ.

ಬಳಿಕ ಅಕಸ್ಮಾತ್ ಬಾವಿಯ ಬಳಿ ಬಂದ ಸ್ಥಳೀಯರು ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡಿರುವುದನ್ನು ಕಂಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಗೋಕಾಕ್ ಗ್ರಾಮೀಣ ಪೊಲೀಸರು ಪರಿಶೀಲನೆ ನಡೆಸಿ ಬಾವಿಯಿಂದ ಶವವನ್ನು ಹೊರ ತೆಗೆಸಿದರು‌.

ಘಟನೆ ಸಂಬಂಧ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Share Post

Leave a Reply

Your email address will not be published. Required fields are marked *

error: Content is protected !!