ಪೊಲೀಸ್ ಠಾಣೆ ಎದುರೇ ಯುವಕ ಆತ್ಮಹತ್ಯೆಗೆ ಯತ್ನ

ಅಥಣಿ : ಖಿನ್ನತೆಗೆ ಒಳಗಾಗಿ ಯುವಕನೋರ್ವ ಪೊಲೀಸ್ ಠಾಣೆ ಎದರೇ ಚಾಕುವಿನಿಂದ ಕತ್ತು ಕೂಯ್ದುಕೊಂಡು ಆತ್ಮಹತ್ಯೆ ಯತ್ನಿಸಿದ ಘಟನೆ ನಡೆದಿದೆ.

ಶಂಕರ್ ಮಾರುತಿ ಕಾಂಬಳೆ(25) ಆತ್ಮಹತ್ಯೆಗೆ ಯತ್ನಿಸಿದ ಯುವಕ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬರಬೇಕಿದೆ. ಕತ್ತು ಕೊಯ್ದುಕೊಂಡು ರಕ್ತಸಿಕ್ತವಾಗಿ ಒದ್ದಾಡುತ್ತಿದ್ದ ಯುವಕನನ್ನು ಕೂಡಲೇ ಪೊಲೀಸರು ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಆತ್ಮ ಹತ್ಯೆಗೆ ಯತ್ನಿಸಿದ ಯುವಕನ ಸ್ಥಿತಿ ಗಂಭೀರವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಹಾರಾಷ್ಟ್ರದ ಮಿರಜ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

  • ವಿಲಾಸ ಕಾಂಬಳೆ ದಿ ನ್ಯೂಸ್24
Share Post

Leave a Reply

Your email address will not be published. Required fields are marked *

error: Content is protected !!