ಗೃಹ ರಕ್ಷಕ ದಳ ನೇಮಕಾತಿಯಲ್ಲಿ ಗೋಲ್‌ಮಾಲ್ ಎಂದು ಆರೋಪಿಸಿ ಪ್ರತಿಭಟನೆ

ರಾಯಚೂರು : ಜಿಲ್ಲೆಯಲ್ಲಿ ನಡೆದ ಈ ಸಾಲಿನ ಗೃಹ ರಕ್ಷಕ ದಳ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆಯಲ್ಲಿ ಗೋಲಮಾಲ್ ನಡೆದಿದೆ ಎಂದು ಆರೋಪಿಸಿ ಜಯ ಕರ್ನಾಟಕ ರಕ್ಷಣಾ ಸೇನೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಜಿಲ್ಲಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ನಂತರ ಸಂಘಟನೆ ರಾಜ್ಯ ಪ್ರಧಾನ ಸಂಚಾಲಕರ ರಾಜಶೇಖರ ಮಾಚರ್ಲಾ ಮಾತನಾಡಿ ಇದೇ ವರ್ಷ ಜುಲೈ ತಿಂಗಳಲ್ಲಿ ನಡೆದ ಗೃಹ ರಕ್ಷಕ ದಳ ಸಿಬ್ಬಂದಿಗಳ ನೇಮಕಾತಿಯ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ 850 ಅಭ್ಯರ್ಥಿಗಳು ಭಾಗವಹಿಸಿದ್ದರು. ಅದರಲ್ಲಿ 83 ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದಾರೆ. ಈ ಪ್ರಕ್ರಿಯೆಯಲ್ಲಿ ರಾಜಕೀಯ ಪ್ರೇರಣೆಯಿಂದ ಹಾಗೂ ಅಧಿಕಾರಿಗಳ ಕುಮ್ಮಕ್ಕಿನಿಂದ ಅಭ್ಯರ್ಥಿಗಳನ್ನು ಆಯ್ಕೆ ಮಾಡಿರುವದು ನಾಚಿಕೆಗೇಡು ಎಂದು ಕಿಡಿಕಾರಿದರು.

ನಂತರ ಜಿಲ್ಲಾಧ್ಯಕ್ಷ ವೀರಭದ್ರಯ್ಯ ಸ್ವಾಮಿ ಮಾತನಾಡಿ ನಿಷ್ಟಾಂವತರಿಗೆ, ಅರ್ಹ ಅಭ್ಯರ್ಥಿಗಳಿಗೆ ಇಲ್ಲಿ ನ್ಯಾಯ ಇಲ್ಲವೇ ಎಂದು ಪ್ರಶ್ನಿಸಿದರು. ಜನರ ರಕ್ಷಣೆ ಮಾಡಬೇಕಾದ ಅಧಿಕಾರಿಗಳು ಇಂದು ಪೋಲಿಸ್ ಇಲಾಖೆಯ ಮತ್ತು ಗೃಹ ರಕ್ಷಕ ದಳದ ನಿಯಮಾವಳಿಗಳನ್ನು ಗಾಳಿ ತೂರಿ ತಮಗೆ ಇಷ್ಟ ಬಂದಂತೆ ಆಯ್ಕೆ ಮಾಡುವುದು ಸರಿಯಲ್ಲ ಎಂದು ಹರಿಹಾಯ್ದರು.

ಕೂಡಲರೆ ಮರು ಪರಿಶೀಲನೆ ಮಾಡಿ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡದೆ ಹೋದರೆ ಬರುವ ದಿನಗಳಲ್ಲಿ ನಮ್ಮ ಸಂಘಟನೆ ವತಿಯಿಂದ ಉಗ್ರವಾದ ಹೋರಾಟ ಮಾಡಲಾಗುವುದೆಂದು ಎಚ್ಚರಿಕೆಯನ್ನು ನೀಡಿದರು.

ಈ ಸಂದರ್ಭದಲ್ಲಿ ಹೈದ್ರಾಬಾದ್ ಕರ್ನಾಟಕ ಭಾಗದ ಅಧ್ಯಕ್ಷ ಹೆಚ್.ಕೆ.ರವಿಕುಮಾರ, ಜಿಲ್ಲಾ ಉಪಾಧ್ಯಕ್ಷ ಕೆ.ಮಲ್ಲೆಶ್ ಮಾಸ್ಟರ್, ಪ್ರಧಾನ ಕಾರ್ಯದರ್ಶಿ ಗಂಗಾಧರ, ಜಿಲ್ಲಾ ಪ್ರಧಾನ ಸಂಚಾಲಕ ಮುರಳೀಧರ ಗಣಮೂರು, ನಗರ ಪ್ರಧಾನ ಸಂಚಾಲಕ ಮುರಳೀಧರ ಕೃಷ್ಣ ಮತ್ತಿತರ ಕಾರ್ಯಕರ್ತರು ಭಾಗವಹಿಸಿದ್ದರು.

Share Post

Leave a Reply

Your email address will not be published. Required fields are marked *

error: Content is protected !!