ಲೋಕಸಭಾ ಚುನಾವಣೆ ಹಿನ್ನೆಲೆ – ಗದಗದಲ್ಲಿ ಅಕ್ರಮ ಮದ್ಯ ವಶ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಗದಗದಲ್ಲಿ ಅನುಮಾನಾಸ್ಪದವಾಗಿ ಸಾಗಿಸುತ್ತಿದ್ದ ಮದ್ಯವನ್ನ ವಶಪಡಿಸಿಕೊಳ್ಳಲಾಗಿದೆ. ನರಗುಂದ ವಿಧಾನಸಭಾ ಕ್ಷೇತ್ರದ ಆಚಮಟ್ಟಿ ಕ್ರಾಸ್ ಬಳಿಯ ಚೆಕ್ ಪೋಸ್ಟ್ ನಲ್ಲಿ ವಶಪಡಿಸಿಕೊಳ್ಳಲಾಗಿದೆ. ನರಗುಂದ ತಹಶೀಲ್ದಾರ್ ಆಶಪ್ಪ ಪೂಜಾರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು 48 ಲಕ್ಷ, 46 ಸಾವಿರ 716 ರೂ, ಮೌಲ್ಯದ ಮದ್ಯ ವಶಕ್ಕೆ ಪಡೆಯಲಾಗಿದೆ. ಮದ್ಯವನ್ನ ಬೆಂಗಳೂರಿನಿಂದ ಗೋಕಾಕ್ ಗೆ ಸಾಗಿಸಲಾಗುತ್ತಿತ್ತು. ಚಾಲಕ ಪ್ರದೀಪ್  ಅಶೋಕ್, ಕ್ಲೀನರ್ ದರ್ಶನ್ ಎಂಬಾತನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.