Sunday, June 13, 2021
Homeಜಿಲ್ಲೆಬೆಂಗಳೂರು ಗ್ರಾಮಾಂತರದೊಡ್ಡಬಳ್ಳಾಪುರ ತಾಲ್ಲೂಕ್ ಆಫೀಸ್ ಬಳಿ ಸರ್ಕಾರಿ ವಾಹನ ಬೆಂಕಿಗಾಹುತಿ.

ಇದೀಗ ಬಂದ ಸುದ್ದಿ

ದೊಡ್ಡಬಳ್ಳಾಪುರ ತಾಲ್ಲೂಕ್ ಆಫೀಸ್ ಬಳಿ ಸರ್ಕಾರಿ ವಾಹನ ಬೆಂಕಿಗಾಹುತಿ.

ದೊಡ್ಡಬಳ್ಳಾಪುರ ತಾಲ್ಲೂಕ್ ಆಫೀಸ್ ಬಳಿ ಕಳೆದ ಎರಡು ವರ್ಷಗಳಿಂದ ಕೆಟ್ಟು ನಿಂತಿದ್ದ ಟಾಟಾ ಸುಮೋ ವಾಹನಕ್ಕೆ ಬೆಂಕಿ ತಗುಲಿರುವ ಘಟನೆ ಸಂಭವಿಸಿದೆ. ಬೆಳಗೆ 7:30ರ ಸುಮಾರಿಗೆ ಯಾರೋ ಕಿಡಿಗೇಡಿಗಳು ನಿಂತಿದ್ದ ವಾಹನಕ್ಕೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ ಎಂಬ ಶಂಕೆಯನ್ನು ಸ್ಥಳೀಯರು ಹೇಳಿದ್ದಾರೆ. ಇನ್ನು ಕೆಲವರು ಇಲ್ಲೆ ಇದ್ದ ತ್ಯಾಜ್ಯಕ್ಕೆ ಬೆಂಕಿ ತಗುಲಿ ಕಾರು ಸುಟ್ಟು ಕರಕಲಾಗಿರುವ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಾರೆ. ತಾಲ್ಲೂಕ್ ಕಛೇರಿ ಬಳಿ ಇದ್ದ ಸ್ಥಳೀಯರು ಬಂದು ಬೆಂಕಿ ನಂದಿಸುವಲ್ಲಿ ಪ್ರಯತ್ನಿಸಿದರು ಉಪಯೋಗಕ್ಕೆ ಬರಲಿಲ್ಲ. ತಕ್ಷಣ ವಿಷಯವನ್ನು ಆಗ್ನಿ ಶಾಮಕ ದಳದವರಿಗೆ ತಿಳಿಸಿದ್ದಾರೆ. ವಿಷಯ ತಿಳಿದ ಆಗ್ನೀ ಶಾಮಕ ದಳದವರು ಸರಿಯಾದ ಸಮಯಕ್ಕೆ ಬಂದು ಬೆಂಕಿ ಹಾರಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ಈ ಘಟನೆಯ ಬಗ್ಗೆ ತಹಸೀಲ್ದಾರು ಯಾವ ರೀತಿ ಕ್ರಮವನ್ನು ತೆಗೆದುಕೊಳ್ಳುತ್ತಾರೆ ಎಂದು ಕಾದು ನೋಡಬೇಕಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img