Thursday, September 23, 2021
Homeಜಿಲ್ಲೆಚಿತ್ರದುರ್ಗಚಿತ್ರದುರ್ಗದಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರ ದುರ್ಮರಣ

ಇದೀಗ ಬಂದ ಸುದ್ದಿ

ಚಿತ್ರದುರ್ಗದಲ್ಲಿ ಭೀಕರ ಅಪಘಾತ – ಒಂದೇ ಕುಟುಂಬದ ಮೂವರ ದುರ್ಮರಣ

ಚಿತ್ರದುರ್ಗದ ಬೊಗಳೇರಹಟ್ಟಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಮತ್ತೊಂದು ಕಾರು ಮತ್ತು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಕೇಶವಮೂರ್ತಿ (40), ನಾಗಮ್ಮ (30), ರಾಧಿಕಾ (22) ಮೃತಪಟ್ಟವರು.  ಕಾರಿನಲ್ಲಿದ್ದ ಮತ್ತೋರ್ವ ಗಾಯಗೊಂಡಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತಪಟ್ಟವರು ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಬಂಗಾರಕ್ಕನಗುಡ್ಡ ಗ್ರಾಮದವರು. ತುರುವನೂರು ಪೊಲೀಸ್ ಠಾಣಾವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img