Sunday, June 13, 2021
Homeರಾಜಕೀಯಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಫಿಕ್ಸ್- ಅಪರೇಷನ್ ಕಮಲದ ಸುಳಿವು ನೀಡಿದ ಬಿಎಸ್ ವೈ

ಇದೀಗ ಬಂದ ಸುದ್ದಿ

ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ಫಿಕ್ಸ್- ಅಪರೇಷನ್ ಕಮಲದ ಸುಳಿವು ನೀಡಿದ ಬಿಎಸ್ ವೈ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಎಲ್ಲಾ ಹಾಲಿ ಸಂಸದರಿಗೆ ಟಿಕೆಟ್ ಸಿಗಲಿದೆ. ಉಳಿದ ಕಡೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಸಿದ್ದಪಡಿಸಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ  ಡಾ.ಉಮೇಶ್ ಜಾದವ್ ರಾಜೀನಾಮೆ ಅಂಗೀಕಾರ ಆಗಿಲ್ಲ. ಆದ್ರೂ ಅವರು ಬಿಜೆಪಿ ಅಭ್ಯರ್ಥಿ ಆಗಿ ಸ್ಪರ್ಧಿಸಲಿದ್ದಾರೆ. ಉಮೇಶ್ ಜಾಧವ್ ರೀತಿಯಲ್ಲಿಯೇ ಇನ್ನೂ ಹಲವು ಶಾಸಕರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ. ಎರಡು, ಮೂರು ದಿನ ಕಾದು ನೋಡಿ ಎಂದು ಹೇಳೋ ಮೂಲಕ ಆಪರೇಷನ್ ಕಮಲದ ಸುಳಿವು ನೀಡಿದರು‌. ಲೋಕಸಭೆಗೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಮಾಡಿಕೊಂಡಿರುವುದರಿಂದ ಬಿಜೆಪಿಗೆ ಅನುಕೂಲವೇ ಆಗಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಯಾವುದೇ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ನಮಗೇನೂ ಚಿಂತೆ ಇಲ್ಲ ಎಂದು ಹೇಳಿದ್ರು.  

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img