Saturday, September 18, 2021
Homeರಾಜ್ಯಬಸವ ಧರ್ಮ ಪೀಠದ ಮಾತೆ ಮಹಾದೇವಿ ಲಿಂಗೈಕ್ಯ

ಇದೀಗ ಬಂದ ಸುದ್ದಿ

ಬಸವ ಧರ್ಮ ಪೀಠದ ಮಾತೆ ಮಹಾದೇವಿ ಲಿಂಗೈಕ್ಯ

ಕಳೆದ ಕೆಲವು ದಿನಗಳಿಂದ ಅನಾರೋಗ್ಯ ಹಿನ್ನೆಲೆಯಲ್ಲಿ ಮಣಿಪಾಲ್‌ ಆಸ್ಪತ್ರೆಯ ತೀವ್ರನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾತೆ ಮಹಾದೇವಿ ಇನ್ನಿಲ್ಲ.  ಇವರು ಕೂಡಲಸಂಗಮದಲ್ಲಿರುವ ಬಸವ ಧರ್ಮಪೀಠದ ಅಧ್ಯಕ್ಷೆಯಾಗಿದ್ದರು.  ನಾಳೆ ಕೂಡಲಸಂಗಮದಲ್ಲಿ ಲಿಂಗೈಕ್ಯರ ಸಂಸ್ಕಾರ ನಡೆಯಲಿದೆ ಎನ್ನಲಾಗಿದೆ.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮಧ್ಯಾಹ್ನ 3.30ಕ್ಕೆ ಲಿಂಗೈಕ್ಯರಾಗಿದ್ದಾರೆ.

1946ರ ಮಾರ್ಚ್ 13ರಂದು ಚಿತ್ರದುರ್ಗ ಜಿಲ್ಲೆಯ ಸಾಸಲಹಟ್ಟಿಯಲ್ಲಿ ಜನಿಸಿದ್ದ ಮಾತೆ ಮಹಾದೇವಿ ಲಿಂಗಾನಂದ ಸ್ವಾಮಿಗಳಿಂದ ಇಷ್ಟಲಿಂಗ ದೀಕ್ಷೆ ಪಡೆದಿದ್ರು. ಲಿಂಗಾಯತ ಪ್ರತ್ಯೇಕ ಧರ್ಮದ ಕೂಗು ಕೇಳಿ ಬಂದಾಗ ಹೋರಾಟದ ನೇತೃತ್ವ ವಹಿಸಿದ್ದು ಮಾತೆ ಮಹಾದೇವಿಯವರು.

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img