ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿದ್ದಂತೆ ವಿವಿಧ ರಾಜ್ಯಗಳಲ್ಲಿ ಪಕ್ಷಾಂತರ ಪರ್ವ ಶುರುವಾಗಿದೆ. ಟಿಎಂಸಿ, ಕಾಂಗ್ರೆಸ್ ಪಕ್ಷದ ಪ್ರಮುಖ ಮುಂಖಡರು ಭಾರತೀಯ ಜನತಾ ಪಾರ್ಟಿ ಸೇರ್ಪಡೆಗೊಳ್ಳುತ್ತಿದ್ದಾರೆ. ಇವತ್ತು ಸೋನಿಯಾ ಗಾಂಧಿ ಆಪ್ತ ಬಿಜೆಪಿ ತೆಕ್ಕೆಗೆ ಜಾರಿದ್ದಾರೆ. ಇದು ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಪಕ್ಷಕ್ಕೆ ಅತೀ ದೊಡ್ಡ ಹಿನ್ನಡೆಯಾಗಿದೆ. ವಡಕ್ಕನ್ ಅವರನ್ನು ಬಿಜೆಪಿ ಹಿರಿಯ ನಾಯಕ, ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಪಕ್ಷಕ್ಕ ಬರಮಾಡಿಕೊಂಡ್ರು. ಬಳಿಕ ಮಾತನಾಡಿದ ವಡಕ್ಕನ್, ಪುಲ್ವಾಮಾ ಉಗ್ರ ದಾಳಿ ಮತ್ತು ಪಾಕ್ ಉಗ್ರ ಶಿಬಿರಗಳ ಮೇಲಿನ ಭಾರತೀಯ ವಾಯು ಪಡೆಯ ಪ್ರತಿ ದಾಳಿಯ ವಿಷಯದಲ್ಲಿ ಕಾಂಗ್ರೆಸ್ ಕೈಗೊಂಡಿರುವ ನಿಲುವು ನಿರಾಶಾದಾಯಕವಾಗಿದೆ ಎಂದು ಹೇಳಿದರು. ದೇಶವನ್ನು ಮುನ್ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಅವರು ಇದೇ ವೇಳೆ ಪ್ರಶಂಸಿಸಿದರು. ‘ಭಾರವಾದ ಹೃದಯದಿಂದ ನಾನು ಕಾಂಗ್ರೆಸ್ ಪಕ್ಷವನ್ನು ತೊರೆದಿದ್ದೇನೆ ಎಂದು ಹೇಳಿದ್ರು. ವಡಕ್ಕನ್ ಈ ಹಿಂದೆ ಸೋನಿಯಾ ಗಾಂಧಿ ಅವರ ಆಪ್ತ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದರು.
