ಜೆಡಿಎಸ್ ಹಾಗೂ ಕಾಂಗ್ರೆಸ್ ದೋಸ್ತಿಗಳಿಗೆ ಕಗ್ಗಂಟಾಗಿ ಪರಿಣಮಿಸಿದ್ದ ಸೀಟು ಹೊಂದಾಣಿಕೆ ಸಮಸ್ಯೆ ಬಗೆಹರಿದಿದೆ. ರಾಜ್ಯದಲ್ಲಿನ 28 ಕ್ಷೇತ್ರಗಳ ಪೈಕಿ ಕಾಂಗ್ರೆಸ್ 20 ಹಾಗೂ ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಒಮ್ಮತ ಮೂಡಿದೆ. ಶಿವಮೊಗ್ಗ, ತುಮಕೂರು, ಹಾಸನ, ಮಂಡ್ಯ, ಬೆಂಗಳೂರು ಉತ್ತರ ಹಾಗೂ ವಿಜಯಪುರ, ಚಿಕ್ಕಮಗಳೂರು, ಉತ್ತರ ಕನ್ನಡ ಕ್ಷೇತ್ರಗಳನ್ನು ಪಡೆದುಕೊಳ್ಳುವಲ್ಲಿ ಜೆಡಿಎಸ್ ಯಶಸ್ವಿಯಾಗಿದೆ. ಮೈಸೂರು ಕ್ಷೇತ್ರವನ್ನ ಉಳಿಸಿಕೊಳ್ಳುವಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ. ತುಮಕೂರು ಕ್ಷೇತ್ರವನ್ನ ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಬಿಟ್ಟುಕೊಟ್ಟಿದೆ. ಇದು ಡಿಸಿಎಂ ಪರಮೇಶ್ವರ್ ಗೆ ದೊಡ್ಡ ಹಿನ್ನಡೆ ಎಂದು ವಿಶ್ಲೇಷಿಸಲಾಗುತ್ತಿದೆ.
