Thursday, September 23, 2021
Homeಜಿಲ್ಲೆಕೋಲಾರಕೋಲಾರದಲ್ಲಿ ಕೆ.ಎಚ್. ಮುನಿಯಪ್ಪ ವಿರೋಧಿ ಅಲೆ – ಟಿಕೆಟ್ ತಪ್ಪಿಸಲು ಸ್ವಪಕ್ಷೀಯರ ಯತ್ನ

ಇದೀಗ ಬಂದ ಸುದ್ದಿ

ಕೋಲಾರದಲ್ಲಿ ಕೆ.ಎಚ್. ಮುನಿಯಪ್ಪ ವಿರೋಧಿ ಅಲೆ – ಟಿಕೆಟ್ ತಪ್ಪಿಸಲು ಸ್ವಪಕ್ಷೀಯರ ಯತ್ನ

ಕೋಲಾರ ಹಾಲಿ ಸಂಸದ ಕೆ.ಎಚ್ ಮುನಿಯಪ್ಪ ಟಿಕೆಟ್ ತಪ್ಪಿಸಲು ಸ್ವಪಕ್ಷೀಯರೇ ಶತ ಪ್ರಯತ್ನ ನಡೆಸುತ್ತಿದ್ದಾರೆ.  ಶ್ರೀನಿವಾಸಪುರ ಶಾಸಕ ಕೆ.ಆರ್ ರಮೇಶ್ ಕುಮಾರ್ ನೇತೃತ್ವದಲ್ಲಿ ಜಿಲ್ಲೆಯ ಕಾಂಗ್ರೆಸ್ ನಿಯೋಗ ದೆಹಲಿಗೆ ತೆರಳಿದೆ. ಶಿಡ್ಲಘಟ್ಟ ಕಾಂಗ್ರೆಸ್ ಶಾಸಕ ವಿ.ಮುನಿಯಪ್ಪ, ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣಸ್ವಾಮಿ, ಮುಳಬಾಗಿಲು ಪಕ್ಷೇತರ ಶಾಸಕ ಎಚ್. ನಾಗೇಶ್, ಎಂಎಲ್ ಸಿ ನಜೀರ್ ಅಹಮದ್, ಮಾಜಿ ಶಾಸಕರಾದ ಕೊತ್ತೂರು ಮಂಜುನಾಥ್ ಸಾಥ್ ನೀಡಿದ್ದಾರೆ. ಕೋಲಾರ ಜೆಡಿಎಸ್ ಶಾಸಕ ಕೆ.ಶ್ರೀನಿವಾಸಗೌಡ, ಮಾಲೂರು ಮಾಜಿ ಶಾಸಕ ಮಂಜುನಾಥ್ ಗೌಡ ಕೂಡ ಇವರ ಬೆಂಬಲಕ್ಕೆ ನಿಂತಿದ್ದಾರೆ. ಸಂಸದ ಮುನಿಯಪ್ಪಗೆ ಈ ಬಾರಿ ಕ್ಷೇತ್ರದಲ್ಲಿ ವಿರೋಧಿ ಅಲೆ ಇದ್ದು ನಾವೇ ಬಿಜೆಪಿ ಹಾದಿ ಸುಗಮ ಮಾಡೋದು ಬೇಡ ಅಂತ ವರಿಷ್ಠರಿಗೆ ಎಚ್ಚರಿಕೆ ಸಂದೇಶ ರವಾನಿಸಲಿದ್ದಾರೆ.   

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img