Tuesday, January 26, 2021
Home ರಾಜ್ಯ ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ

ಇದೀಗ ಬಂದ ಸುದ್ದಿ

ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಗಂಭೀರ

ಕೂಡಲಸಂಗಮದ ಬಸವಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಆರೋಗ್ಯ ಸ್ಥಿತಿ ಬಿಗಡಾಯಿಸಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಒಂದು ವಾರದಿಂದ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀವ್ರ ಉಸಿರಾಟದ ಸಮಸ್ಯೆ ಮತ್ತು ಶ್ವಾಸಕೋಶದ ಸೋಂಕಿನಿಂದ ಮಾತೆ ಮಹಾದೇವಿ ಬಳಲುತ್ತಿದ್ದಾರೆ. ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿರೋ ಅವರು ಡಯಾಲಿಸಿಸ್ ಮಾಡಿಸಿಕೊಳ್ಳುತ್ತಿದ್ದರು.  ಗೃಹ ಸಚಿವ ಎಂ.ಬಿ. ಪಾಟೀಲ್ ಮಹಾದೇವಿ ಅವರಿಗೆ ಎಲ್ಲಿ ಚಿಕಿತ್ಸೆ ನಡೆಸಬೇಕು ಎಂಬುದರ ಬಗ್ಗೆ ಈಗಾಗಲೇ ಚರ್ಚಿಸಿದ್ದಾರೆ.  ಪ್ರತ್ಯೇಕ ಲಿಂಗಾಯತ ಧರ್ಮ ಹೋರಾಟದಲ್ಲಿ ಮಾತೆ ಮಹಾದೇವಿ ಮುಂಚೂಣಿಯಲ್ಲಿದ್ದರು. 

TRENDING