ತೀವ್ರ ಕುತೂಹಲ ಮೂಡಿಸಿದ್ದ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ – ಜೆಡಿಎಸ್ ಮೈತ್ರಿ ಸರಕಾರದ ಉಮೇದುವಾರಿಕೆಗೆ ತೆರೆ ಬಿದ್ದಿದೆ. ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್ ಶಾಸಕರ ಸಮ್ಮುಖದಲ್ಲಿ ನಿಖಿಲ್ ಕುಮಾರಸ್ವಾಮಿ ಹೆಸರನ್ನು ಘೋಷಿಸಿದರು. ಹೆಸರು ಘೋಷಿಸೋ ವೇಳೆ ವೇದಿಕೆಯಲ್ಲಿ ಸಿಎಂ ಕುಮಾರಸ್ವಾಮಿಯಾಗಲಿ, ಮಾಜಿ ಪ್ರಧಾನಿ ದೇವೇಗೌಡರಾಗಲಿ ಇರಲಿಲ್ಲ. ಹನ್ನೆರಡು ಗಂಟೆಯೊಳಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಬೇಕಾಗಿದ್ದ ಅನಿವಾರ್ಯತೆ ಇದ್ದುದರಿಂದ ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ವೇದಿಕೆಯಲ್ಲಿ ನಿಖಿಲ್ ಹೆಸರನ್ನು ಘೋಷಿಸಿದರು. ಶುಭ ಗಳಿಗೆ ಹಿನ್ನಲೆ ಹೆಸರು ಘೋಷಣೆ ಮಾಡಿರುವುದಾಗಿ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ರು. ನಿನ್ನೆ ಹಾಸನದಲ್ಲಿ ದೇವೇಗೌಡರೇ ಮೊಮ್ಮಗ ಪ್ರಜ್ವಲ್ ರೇವಣ್ಣ ಹೆಸರು ಘೋಷಿಸಿದ್ರು.
