Friday, July 30, 2021
Homeದೇಶಮತಯಂತ್ರ ವಿವಾದ – ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟೀಸ್

ಇದೀಗ ಬಂದ ಸುದ್ದಿ

ಮತಯಂತ್ರ ವಿವಾದ – ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟೀಸ್

ಮತಯಂತ್ರಗಳ ಕುರಿತಾಗಿ ಪ್ರತಿಪಕ್ಷಗಳು ಸುಪ್ರೀಂಕೋರ್ಟ್​ಗೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಚುನಾವಣಾ ಆಯೋಗಕ್ಕೆ ನೋಟೀಸ್​ ಜಾರಿ ಮಾಡಿದ್ದಾರೆ. ಈ ಬಗ್ಗೆ  ಆಯೋಗ ಸ್ಪಷ್ಟನೆ ನೀಡಬೇಕೆಂದು ಸೂಚನೆ ನೀಡಿದ್ದಾರೆ.  ಮುಂದಿನ ವಿಚಾರಣೆಯನ್ನು ಮಾರ್ಚ್​ 25ಕ್ಕೆ ಮುಂದೂಡಿದ್ದಾರೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ  ಅರ್ಧದಷ್ಟು ಮತ ಯಂತ್ರಗಳನ್ನು ವಿವಿಪ್ಯಾಟ್​ನೊಂದಿಗೆ  ಕ್ರಾಸ್​ ಚೆಕ್​   ಮಾಡಿ, ಆನಂತರ ಫಲಿತಾಂಶ ಘೋಷಣೆ ಮಾಡಬೇಕೆಂದು ಪ್ರತಿಪಕ್ಷಗಳು ಸುಪ್ರೀಂ ಮೆಟ್ಟಿಲೇರಿದ್ದವು. ಮತಯಂತ್ರಗಳ ಮೂಲಕ ಸುಲಭವಾಗಿ ಮೋಸ  ಮಾಡಬಹುದು ಎಂದು ಪ್ರತಿಪಕ್ಷಗಳು ಆರೋಪ ಮಾಡಿದ್ದವು. 

TRENDING

spot_img
spot_img
spot_img
spot_img
spot_img
spot_img
spot_img
spot_img
spot_img
spot_img