Thursday, January 21, 2021
Home ರಾಜ್ಯ 100 ರೂ ದಂಡ ಕಟ್ಟಿ ಬಿಡುಗಡೆಯಾದ ಗೂಳಿಹಟ್ಟಿ

ಇದೀಗ ಬಂದ ಸುದ್ದಿ

100 ರೂ ದಂಡ ಕಟ್ಟಿ ಬಿಡುಗಡೆಯಾದ ಗೂಳಿಹಟ್ಟಿ

ಚೆಕ್ ಬೌನ್ಸ್ ಆರೋಪ ಎದುರಿಸುತ್ತಿದ್ದ ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿ, ಬಳಿಕ ಬಿಡುಗಡೆ ಮಾಡಿದೆ. ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಈ ವೇಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶಾಸಕರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಸೂಚನೆ ನೀಡಿದರು. ತಕ್ಷಣವೇ ಪೊಲೀಸರು ಶಾಸಕ ಗೂಳಿಹಟ್ಟಿ ಶೇಖರ್ ಅವರನ್ನು ವಶಕ್ಕೆ ಪಡೆದರು. ಬಳಿಕ ವಿಚಾರಣೆ ನಡೆಸಿದ ಕೋರ್ಟ್, ಗೈರು ಹಾಜರಾಗಿದ್ದಕ್ಕೆ 100 ರೂ. ದಂಡ ವಿಧಿಸಿ ಬಿಡುಗಡೆ ಮಾಡಿತು. ಮತ್ತೆ ವಿಚಾರಣೆಗೆ ಗೈರಾದರೆ ಜೈಲಿಗೆ ಕಳುಹಿಸುವುದಾಗಿ ನ್ಯಾಯಾಧೀಶರು ಎಚ್ಚರಿಕೆ ನೀಡಿದ್ರು. ಶಾಸಕ ಗೂಳಿಹಟ್ಟಿ ಶೇಖರ್ ವಿರುದ್ಧ ಮಹಾಲಕ್ಷ್ಮಿ ಲೇಔಟ್ ಜನತಾ ಕೋ-ಆಪರೇಟಿವ್ ಸೊಸೈಟಿ 1.25 ಕೋಟಿ ರೂ. ಚೆಕ್ ಬೌನ್ಸ್ ದೂರು ದಾಖಲಿಸಿತ್ತು. ಜನತಾ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ರು ಶಾಸಕರು ಮಾತ್ರ ವಿಚಾರಣೆಗೆ ಹಾಜರಾಗದೇ ಗೈರಾಗುತ್ತಿದ್ದರು. ಇದರಿಂದಾಗಿ ಕೋರ್ಟ್ ಶಾಸಕ ಗೂಳಿಹಳ್ಳಿ ಶೇಖರ್ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು

TRENDING