ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ಶ್ರೀಶಾಂತ್ ಮೇಲಿದ್ದ ಅಜೀವ ನಿಷೇಧವನ್ನು ಸುಪ್ರೀಂ ಕೋರ್ಟ್ ತೆರವುಗೊಳಿಸಿದೆ. ಸ್ಪಾಟ್ ಫಿಕ್ಸಿಂಗ್ ಸಂಬಂಧ ಬಿಸಿಸಿಐ ಶಿಸ್ತು ಸಮಿತಿ ಶ್ರೀಶಾಂತ್ ಮೇಲೆ ಅಜೀವ ನಿಷೇಧ ವಿಧಿಸಿತ್ತು. ಈ ನಿಷೇಧವನ್ನು ತೆರವುಗೊಳಿಸಿರುವ ಸುಪ್ರೀಂ ಕೋರ್ಟ್ ಶಿಕ್ಷೆಯ ಪ್ರಮಾಣವನ್ನ ಮೂರು ತಿಂಗಳೊಳಗೆ ಪ್ರಕಟಿಸುವಂತೆ ಬಿಸಿಸಿಐಗೆ ಸೂಚಿಸಿದೆ. ನ್ಯಾಯಮೂರ್ತಿ ಅಶೋಕ್ ಭೂಷಣ್ ಹಾಗೂ ಕೆ.ಎಂ. ಜೋಸೆಫ್ ನೇತೃತ್ವದ ದ್ವಿಸದಸ್ಯ ಪೀಠ ತೀರ್ಪು ನೀಡಿದೆ. ಶ್ರೀಶಾಂತ್ ಪರ ವಕೀಲರು ಭಾರತ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್, ಪಾಕ್ ತಂಡದ ಸಲೀಂ ಮಲ್ಲಿಕ್, ಅವರ ಅಜೀವ ನಿಷೇಧ ತೆರವುಗೊಳಿಸಿದ್ದನ್ನ ನ್ಯಾಯಾಲಕ್ಕೆ ಮನವರಿಕೆ ಮಾಡಿದ್ರು. 2013ರ ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣದಲ್ಲಿ ಶ್ರೀಶಾಂತ್ ಮೇಲಿನ ಬಿಸಿಸಿಐ ಅಜೀವ ನಿಷೇಧವನ್ನು ಕೇರಳ ಹೈಕೋರ್ಟ್ ಎತ್ತಿ ಹಿಡಿದಿತ್ತು. ಇದನ್ನು ಪ್ರಶ್ನಿಸಿ ಶ್ರೀಶಾಂತ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
